الر ۚ تِلْكَ آيَاتُ الْكِتَابِ وَقُرْآنٍ مُّبِينٍ (1) ಒಂದು ಲಿಖಿತ ಕಾಲವನ್ನು ನಿಗದಿಪಡಿಸದೆ ನಾವು ಯಾವ ಜನಾಂಗವನ್ನೂ ನಾಶ ಮಾಡಿದ್ದಿಲ್ಲ |
رُّبَمَا يَوَدُّ الَّذِينَ كَفَرُوا لَوْ كَانُوا مُسْلِمِينَ (2) ತನ್ನ ನಿಗದಿತ ಅವಧಿಯನ್ನು ಮೀರಿ ಮುನ್ನಡೆಯಲು ಅಥವಾ ಅದರಿಂದ ಹಿಂದೆ ಉಳಿಯಲು ಯಾವ ಸಮುದಾಯಕ್ಕೂ ಸಾಧ್ಯವಾಗದು |
ذَرْهُمْ يَأْكُلُوا وَيَتَمَتَّعُوا وَيُلْهِهِمُ الْأَمَلُ ۖ فَسَوْفَ يَعْلَمُونَ (3) ಅವರು (ಧಿಕ್ಕಾರಿಗಳು) ಹೇಳಿದರು; ‘‘ದಿವ್ಯ ಉಪದೇಶ ಇಳಿಸಿ ಕೊಡಲಾಗಿರು ವವನೇ, ನೀನೊಬ್ಬ ಹುಚ್ಚನೇ ಸರಿ |
وَمَا أَهْلَكْنَا مِن قَرْيَةٍ إِلَّا وَلَهَا كِتَابٌ مَّعْلُومٌ (4) ನೀನು ಸತ್ಯವಂತನಾಗಿದ್ದರೆ, ನೀನೇಕೆ ನಮ್ಮ ಬಳಿಗೆ ಮಲಕ್‌ಗಳನ್ನು ಕರೆತರುವುದಿಲ್ಲ?’’ |
مَّا تَسْبِقُ مِنْ أُمَّةٍ أَجَلَهَا وَمَا يَسْتَأْخِرُونَ (5) ನಿಜವಾಗಿ ನಾವು ಮಲಕ್‌ಗಳನ್ನು ಸತ್ಯದೊಂದಿಗೆ ಮಾತ್ರ ಕಳುಹಿಸುತ್ತೇವೆ. ಆದರೆ ಆಗ ಅವರಿಗೆ (ಧಿಕ್ಕಾರಿಗಳಿಗೆ) ಹೆಚ್ಚಿನ ಕಾಲಾವಧಿ ನೀಡಲಾಗುವುದಿಲ್ಲ |
وَقَالُوا يَا أَيُّهَا الَّذِي نُزِّلَ عَلَيْهِ الذِّكْرُ إِنَّكَ لَمَجْنُونٌ (6) ಖಂಡಿತವಾಗಿಯೂ ನಾವೇ ಈ ದಿವ್ಯ ಬೋಧನೆಯನ್ನು ಇಳಿಸಿ ಕೊಟ್ಟವರು ಮತ್ತು ಖಂಡಿತವಾಗಿಯೂ ನಾವೇ ಇದರ ಸಂರಕ್ಷಕರಾಗಿದ್ದೇವೆ |
لَّوْ مَا تَأْتِينَا بِالْمَلَائِكَةِ إِن كُنتَ مِنَ الصَّادِقِينَ (7) ನಿಮಗಿಂತ ಹಿಂದಿನ ಜನವರ್ಗಗಳಲ್ಲೂ ನಾವು (ದೂತರನ್ನು) ರವಾನಿಸಿದ್ದೆವು |
مَا نُنَزِّلُ الْمَلَائِكَةَ إِلَّا بِالْحَقِّ وَمَا كَانُوا إِذًا مُّنظَرِينَ (8) ಅವರ ಬಳಿಗೆ ಬಂದ ದೂತರಲ್ಲಿ ಯಾರೂ ಅಪಹಾಸ್ಯಕ್ಕೆ ತುತ್ತಾಗದೆ ಇರಲಿಲ್ಲ |
إِنَّا نَحْنُ نَزَّلْنَا الذِّكْرَ وَإِنَّا لَهُ لَحَافِظُونَ (9) ಈ ರೀತಿ ನಾವು ಅದನ್ನು (ಅಪಹಾಸ್ಯವನ್ನು) ಅಪರಾಧಿಗಳ ಮನಸ್ಸುಗಳೊಳಗೆ ಬಿತ್ತಿರುತ್ತೇವೆ |
وَلَقَدْ أَرْسَلْنَا مِن قَبْلِكَ فِي شِيَعِ الْأَوَّلِينَ (10) ಅವರು ಇದನ್ನು (ಈ ಉಪದೇಶವನ್ನು) ನಂಬಲಾರರು. ಅದುವೇ, ಹಿಂದಿನವರ ಸಂಪ್ರದಾಯವಾಗಿದೆ |
وَمَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ (11) ಒಂದು ವೇಳೆ ನಾವು ಅವರ ಪಾಲಿಗೆ ಆಕಾಶದ ಒಂದು ಬಾಗಿಲನ್ನು ತೆರೆದಿದ್ದರೆ ಮತ್ತು ಅವರು ಆ ಮೂಲಕ ಮೇಲೇರುತ್ತಲೇ ಇದ್ದಿದ್ದರೆ – |
كَذَٰلِكَ نَسْلُكُهُ فِي قُلُوبِ الْمُجْرِمِينَ (12) ಆಗಲೂ ಅವರು, ‘‘ನಮ್ಮ ದೃಷ್ಟಿಗಳನ್ನು ವಂಚಿಸಲಾಗಿದೆ, ನಿಜವಾಗಿ ನಮ್ಮನ್ನು ಮಂತ್ರ ಮುಗ್ಧಗೊಳಿಸಲಾಗಿದೆ’’ ಎಂದೇ ಹೇಳುತ್ತಿದ್ದರು |
لَا يُؤْمِنُونَ بِهِ ۖ وَقَدْ خَلَتْ سُنَّةُ الْأَوَّلِينَ (13) ಖಂಡಿತವಾಗಿಯೂ ನಾವು ಆಕಾಶದಲ್ಲಿ ತಾರಾ ಮಂಡಲಗಳನ್ನು ನಿರ್ಮಿಸಿದೆವು ಮತ್ತು ನಾವು ಅವುಗಳನ್ನು ನೋಡುವವರ ಪಾಲಿಗೆ ಅಲಂಕಾರವಾಗಿಸಿದೆವು |
وَلَوْ فَتَحْنَا عَلَيْهِم بَابًا مِّنَ السَّمَاءِ فَظَلُّوا فِيهِ يَعْرُجُونَ (14) ಮತ್ತು ನಾವು ಅವುಗಳನ್ನು ಎಲ್ಲ ಶಪಿತ ಶೈತಾನರಿಂದ ಸುರಕ್ಷಿತವಾಗಿಟ್ಟೆವು |
لَقَالُوا إِنَّمَا سُكِّرَتْ أَبْصَارُنَا بَلْ نَحْنُ قَوْمٌ مَّسْحُورُونَ (15) ಕದ್ದು ಆಲಿಸಲು ಪ್ರಯತ್ನಿಸುವಾತನನ್ನು ಒಂದು ಉಜ್ವಲ ಬೆಂಕಿಯು ಹಿಂಬಾಲಿಸುತ್ತದೆ |
وَلَقَدْ جَعَلْنَا فِي السَّمَاءِ بُرُوجًا وَزَيَّنَّاهَا لِلنَّاظِرِينَ (16) ಹಾಗೆಯೇ ನಾವು ಭೂಮಿಯನ್ನು ಹರಡಿದೆವು ಮತ್ತು ಅದರಲ್ಲಿ ಬೆಟ್ಟಗಳನ್ನು ನೆಟ್ಟೆವು ಹಾಗೂ ಅದರಲ್ಲಿ ಎಲ್ಲವನ್ನೂ ಸಮರ್ಪಕ ಪ್ರಮಾಣದಲ್ಲಿ ಬೆಳೆಸಿದೆವು |
وَحَفِظْنَاهَا مِن كُلِّ شَيْطَانٍ رَّجِيمٍ (17) ಅದರಲ್ಲಿ ನಾವು ನಿಮಗೂ ನೀವು ಯಾರ ಅನ್ನದಾತರಲ್ಲವೋ ಅವರಿಗೂ ಜೀವನೋಪಾಯಗಳನ್ನು ಒದಗಿಸಿದೆವು |
إِلَّا مَنِ اسْتَرَقَ السَّمْعَ فَأَتْبَعَهُ شِهَابٌ مُّبِينٌ (18) ನಮ್ಮ ಬಳಿ ಪ್ರತಿಯೊಂದು ವಸ್ತುವಿನ ಭಂಡಾರಗಳೇ ಇವೆ. (ಆದರೆ) ನಾವು ಅವುಗಳನ್ನು ಒಂದು ನಿರ್ದಿಷ್ಟ ಪ್ರಮಾಣದಲ್ಲಿ ಮಾತ್ರ ಇಳಿಸಿಕೊಡುತ್ತೇವೆ |
وَالْأَرْضَ مَدَدْنَاهَا وَأَلْقَيْنَا فِيهَا رَوَاسِيَ وَأَنبَتْنَا فِيهَا مِن كُلِّ شَيْءٍ مَّوْزُونٍ (19) ನಾವು ನೀರು ತುಂಬಿದ ಗಾಳಿಯನ್ನು ರವಾನಿಸಿದೆವು ಮತ್ತು ನಾವು ಆಕಾಶದಿಂದ ನೀರನ್ನು ಇಳಿಸಿ ಅದನ್ನು ನಿಮಗೆ ಕುಡಿಸಿದೆವು. ಅದೇನೂ ನಿಮ್ಮ ಸಂಗ್ರಹದಲ್ಲಿರಲಿಲ್ಲ |
وَجَعَلْنَا لَكُمْ فِيهَا مَعَايِشَ وَمَن لَّسْتُمْ لَهُ بِرَازِقِينَ (20) ಖಂಡಿತ ನಾವೇ (ಎಲ್ಲರನ್ನೂ) ಜೀವಂತಗೊಳಿಸುವವರು ಹಾಗೂ ಸಾಯಿಸುವವರಾಗಿದ್ದೇವೆ ಮತ್ತು (ಅಂತಿಮವಾಗಿ) ನಾವೇ ಎಲ್ಲರ ಉತ್ತರಾಧಿಕಾರಿಗಳಾಗಿರುತ್ತೇವೆ |
وَإِن مِّن شَيْءٍ إِلَّا عِندَنَا خَزَائِنُهُ وَمَا نُنَزِّلُهُ إِلَّا بِقَدَرٍ مَّعْلُومٍ (21) ನಿಮ್ಮಲ್ಲಿ ಮುಂದೆ ದಾಟಿ ಹೋದವರನ್ನೂ ನಾವು ಖಂಡಿತ ಬಲ್ಲೆವು ಮತ್ತು ಹಿಂದೆ ಉಳಿದಿರುವವರನ್ನೂ ನಾವು ಖಂಡಿತ ಬಲ್ಲೆವು |
وَأَرْسَلْنَا الرِّيَاحَ لَوَاقِحَ فَأَنزَلْنَا مِنَ السَّمَاءِ مَاءً فَأَسْقَيْنَاكُمُوهُ وَمَا أَنتُمْ لَهُ بِخَازِنِينَ (22) ಖಂಡಿತ ನಿಮ್ಮ ಒಡೆಯನೇ ಅವರೆಲ್ಲರನ್ನೂ ಒಂದೆಡೆ ಸೇರಿಸುವನು. ಅವನು ಖಂಡಿತ ತುಂಬಾ ಯುಕ್ತಿವಂತನೂ ಅರಿವು ಉಳ್ಳವನೂ ಆಗಿದ್ದಾನೆ |
وَإِنَّا لَنَحْنُ نُحْيِي وَنُمِيتُ وَنَحْنُ الْوَارِثُونَ (23) ಖಂಡಿತವಾಗಿಯೂ ನಾವೇ ಮಾನವನನ್ನು ಕರಿ ಆವೆ ಮಣ್ಣಿನ ಒಣಗಾರೆಯಿಂದ ಸೃಷ್ಟಿಸಿರುವೆವು |
وَلَقَدْ عَلِمْنَا الْمُسْتَقْدِمِينَ مِنكُمْ وَلَقَدْ عَلِمْنَا الْمُسْتَأْخِرِينَ (24) ಅದಕ್ಕಿಂತಲೂ ಮುನ್ನ ನಾವು ತೀಕ್ಷ್ಣವಾದ ಬೆಂಕಿಯಿಂದ ಜಿನ್ನ್‌ಗಳನ್ನು ಸೃಷ್ಟಿಸಿದ್ದೆವು |
وَإِنَّ رَبَّكَ هُوَ يَحْشُرُهُمْ ۚ إِنَّهُ حَكِيمٌ عَلِيمٌ (25) ನಿಮ್ಮ ಒಡೆಯನು, ಮಲಕ್‌ಗಳೊಡನೆ ಹೀಗೆಂದಿದ್ದನು; ನಾನು ಕರಿ ಆವೆ ಮಣ್ಣಿನ ಒಣಗಾರೆಯಿಂದ ಒಬ್ಬ ಮಾನವನನ್ನು ಸೃಷ್ಟಿಸಲಿದ್ದೇನೆ |
وَلَقَدْ خَلَقْنَا الْإِنسَانَ مِن صَلْصَالٍ مِّنْ حَمَإٍ مَّسْنُونٍ (26) ನಾನು ಅವನನ್ನು ಸಜ್ಜುಗೊಳಿಸಿ ಅವನಲ್ಲಿ ನನ್ನ ಆತ್ಮವನ್ನು ಊದಿದಾಗ ನೀವು ಅವನಿಗೆ ಸಾಷ್ಟಾಂಗವೆರಗಿರಿ |
وَالْجَانَّ خَلَقْنَاهُ مِن قَبْلُ مِن نَّارِ السَّمُومِ (27) ಅದರಂತೆ, ಎಲ್ಲ ಮಲಕ್‌ಗಳೂ ಸಾಷ್ಟಾಂಗವೆರಗಿದರು |
وَإِذْ قَالَ رَبُّكَ لِلْمَلَائِكَةِ إِنِّي خَالِقٌ بَشَرًا مِّن صَلْصَالٍ مِّنْ حَمَإٍ مَّسْنُونٍ (28) ಆದರೆ ಇಬ್ಲೀಸನ ಹೊರತು. ಅವನು, ಸಾಷ್ಟಾಂಗ ವೆರಗಿದವರ ಜೊತೆ ಸೇರಲು ನಿರಾಕರಿಸಿದನು |
فَإِذَا سَوَّيْتُهُ وَنَفَخْتُ فِيهِ مِن رُّوحِي فَقَعُوا لَهُ سَاجِدِينَ (29) ಅವನು (ಅಲ್ಲಾಹನು) ಕೇಳಿದನು; ಓ ಇಬ್ಲೀಸ್, ನೀನೇಕೆ ಸಾಷ್ಟಾಂಗವೆರಗಿದವರ ಜೊತೆ ಸೇರಲಿಲ್ಲ |
فَسَجَدَ الْمَلَائِكَةُ كُلُّهُمْ أَجْمَعُونَ (30) ಅವನು (ಇಬ್ಲೀಸ್) ಹೇಳಿದನು; ನೀನು ಆವೆಮಣ್ಣಿನ ಒಣಗಾರೆಯಿಂದ ಸೃಷ್ಟಿಸಿರುವ ಮಾನವನಿಗೆ ಸಾಷ್ಟಾಂಗ ವೆರಗುವವನು ನಾನಲ್ಲ |
إِلَّا إِبْلِيسَ أَبَىٰ أَن يَكُونَ مَعَ السَّاجِدِينَ (31) ಅವನು (ಅಲ್ಲಾಹನು) ಹೇಳಿದನು; ನೀನು ಇಲ್ಲಿಂದ ತೊಲಗು. ಖಂಡಿತವಾಗಿಯೂ ನೀನು ಶಪಿತನು |
قَالَ يَا إِبْلِيسُ مَا لَكَ أَلَّا تَكُونَ مَعَ السَّاجِدِينَ (32) ಅಂತಿಮ ವಿಚಾರಣೆಯ ದಿನದವರೆಗೂ ನಿನ್ನ ಮೇಲೆ ಶಾಪವಿರುವುದು |
قَالَ لَمْ أَكُن لِّأَسْجُدَ لِبَشَرٍ خَلَقْتَهُ مِن صَلْصَالٍ مِّنْ حَمَإٍ مَّسْنُونٍ (33) ಅವನು ಹೇಳಿದನು; ‘‘ನನ್ನೊಡೆಯಾ, (ಎಲ್ಲ ನಿರ್ಜೀವಿಗಳನ್ನು) ಜೀವಂತಗೊಳಿಸಲಾಗುವ ದಿನದ ತನಕ ನನಗೆ ಕಾಲಾವಕಾಶವನ್ನು ನೀಡು.’’ |
قَالَ فَاخْرُجْ مِنْهَا فَإِنَّكَ رَجِيمٌ (34) ಅವನು (ಅಲ್ಲಾಹನು) ಹೇಳಿದನು; ಇದೋ, ನಿನಗೆ ಕಾಲಾವಕಾಶ ನೀಡಲಾಗಿದೆ |
وَإِنَّ عَلَيْكَ اللَّعْنَةَ إِلَىٰ يَوْمِ الدِّينِ (35) – ಒಂದು ನಿರ್ದಿಷ್ಟ ದಿನದ ವರೆಗೆ |
قَالَ رَبِّ فَأَنظِرْنِي إِلَىٰ يَوْمِ يُبْعَثُونَ (36) ಅವನು (ಇಬ್ಲೀಸ್) ಹೇಳಿದನು; ನನ್ನೊಡೆಯಾ, ನೀನು ನನ್ನನ್ನು ದಾರಿ ತಪ್ಪಿಸಿರುವುದರಿಂದ ನಾನು (ತಪ್ಪು ದಾರಿಯನ್ನು) ಭೂಮಿಯಲ್ಲಿರುವವರಿಗೆ ಚಂದಗಾಣಿಸುವೆನು ಮತ್ತು ಅವರೆಲ್ಲರನ್ನೂ ದಾರಿತಪ್ಪಿಸಿ ಬಿಡುವೆನು |
قَالَ فَإِنَّكَ مِنَ الْمُنظَرِينَ (37) ಅವರ ಪೈಕಿ ನಿನ್ನ ಆಯ್ದ ದಾಸರ ಹೊರತು |
إِلَىٰ يَوْمِ الْوَقْتِ الْمَعْلُومِ (38) ಅವನು (ಅಲ್ಲಾಹನು) ಹೇಳಿದನು; ಇದು ನನ್ನ ಕಡೆಗಿರುವ ನೇರ ಮಾರ್ಗ |
قَالَ رَبِّ بِمَا أَغْوَيْتَنِي لَأُزَيِّنَنَّ لَهُمْ فِي الْأَرْضِ وَلَأُغْوِيَنَّهُمْ أَجْمَعِينَ (39) ಖಂಡಿತವಾಗಿಯೂ ಆ ನನ್ನ ದಾಸರ ಮೇಲೆ ನಿನ್ನ ಅಧಿಕಾರವೇನೂ ನಡೆಯದು – ನಿನ್ನನ್ನು ಅನುಸರಿಸಿದ ದಾರಿಗೇಡಿಗಳ ಹೊರತು |
إِلَّا عِبَادَكَ مِنْهُمُ الْمُخْلَصِينَ (40) ಖಂಡಿತವಾಗಿಯೂ, ನರಕವೇ ಅವರೆಲ್ಲರಿಗೆ ವಾಗ್ದಾನ ಮಾಡಲಾದ ನೆಲೆಯಾಗಿದೆ |
قَالَ هَٰذَا صِرَاطٌ عَلَيَّ مُسْتَقِيمٌ (41) ಅದಕ್ಕೆ ಏಳು ಬಾಗಿಲುಗಳಿರುವವು. ಪ್ರತಿಯೊಂದು ಬಾಗಿಲಿಗೂ ಅವರಲ್ಲಿನ ಒಂದು ಪಾಲು ನಿಗದಿತವಾಗಿದೆ |
إِنَّ عِبَادِي لَيْسَ لَكَ عَلَيْهِمْ سُلْطَانٌ إِلَّا مَنِ اتَّبَعَكَ مِنَ الْغَاوِينَ (42) ಧರ್ಮನಿಷ್ಠರು ಖಂಡಿತ ತೋಟಗಳಲ್ಲಿ ಹಾಗೂ ಝರಿಗಳಲ್ಲಿ ಇರುವರು |
وَإِنَّ جَهَنَّمَ لَمَوْعِدُهُمْ أَجْمَعِينَ (43) ‘‘ಶಾಂತಿಯೊಂದಿಗೆ ಹಾಗೂ ಸುರಕ್ಷಿತರಾಗಿ ಇವುಗಳೊಳಗೆ ಪ್ರವೇಶಿಸಿರಿ’’ (ಎನ್ನುತ್ತಾ ಅವರನ್ನು ಸ್ವಾಗತಿಸಲಾಗುವುದು) |
لَهَا سَبْعَةُ أَبْوَابٍ لِّكُلِّ بَابٍ مِّنْهُمْ جُزْءٌ مَّقْسُومٌ (44) ಅವರ ಎದೆಗಳಲ್ಲಿ ಉಳಿದಿದ್ದ ವೈಷಮ್ಯವನ್ನೆಲ್ಲಾ ನಾವು ಕಿತ್ತೆಸೆದೆವು – ಅವರು ಸಹೋದರರಾಗಿ ಆಸನಗಳಲ್ಲಿ ಎದುರು ಬದುರಾಗಿ ಕುಳಿತಿರುವರು |
إِنَّ الْمُتَّقِينَ فِي جَنَّاتٍ وَعُيُونٍ (45) ಅಲ್ಲಿ ಯಾವ ಸಂಕಟವೂ ಅವರನ್ನು ಬಾಧಿಸದು ಮತ್ತು ಅವರನ್ನೆಂದೂ ಅಲ್ಲಿಂದ ಹೊರ ಹಾಕಲಾಗದು |
ادْخُلُوهَا بِسَلَامٍ آمِنِينَ (46) ನನ್ನ ದಾಸರಿಗೆ ತಿಳಿಸಿ ಬಿಡಿರಿ; ನಾನು ಖಂಡಿತ ತುಂಬಾ ಕ್ಷಮಿಸುವವನು ಮತ್ತು ತುಂಬಾ ಕರುಣಾಳುವೆಂದು |
وَنَزَعْنَا مَا فِي صُدُورِهِم مِّنْ غِلٍّ إِخْوَانًا عَلَىٰ سُرُرٍ مُّتَقَابِلِينَ (47) ಮತ್ತು ನನ್ನ ಶಿಕ್ಷೆಯೂ ತುಂಬಾ ಕಠೋರ ಶಿಕ್ಷೆಯಾಗಿರುವುದೆಂದು |
لَا يَمَسُّهُمْ فِيهَا نَصَبٌ وَمَا هُم مِّنْهَا بِمُخْرَجِينَ (48) ಇಬ್ರಾಹೀಮರ ಅತಿಥಿಗಳ ಕುರಿತು ಅವರಿಗೆ ತಿಳಿಸಿರಿ |
۞ نَبِّئْ عِبَادِي أَنِّي أَنَا الْغَفُورُ الرَّحِيمُ (49) ಅವರು, ಅವರ ಬಳಿಗೆ ಬಂದಾಗ ‘ಸಲಾಮ್’ (ಶಾಂತಿ) ಎಂದರು. ಆಗ ಅವರು (ಇಬ್ರಾಹೀಮರು), ನಮಗೆ ನಿಮ್ಮ ಕುರಿತು ಆತಂಕವಿದೆ ಎಂದರು |
وَأَنَّ عَذَابِي هُوَ الْعَذَابُ الْأَلِيمُ (50) ಅವರು ಹೇಳಿದರು; ಆತಂಕ ಪಡಬೇಡಿ. ನಾವು ನಿಮಗೆ ಒಬ್ಬ ಜ್ಞಾನವಂತ ಪುತ್ರನ ಶುಭವಾರ್ತೆ ನೀಡುತ್ತೇವೆ |
وَنَبِّئْهُمْ عَن ضَيْفِ إِبْرَاهِيمَ (51) ಅವರು (ಇಬ್ರಾಹೀಮ್) ಹೇಳಿದರು; ನೀವೇನು ಮುದಿತನ ಆವರಿಸಿರುವ ನನಗೆ ಶುಭವಾರ್ತೆ ನೀಡುತ್ತಿರುವಿರಾ – ಅದೆಂತಹ ಶುಭವಾರ್ತೆ ನೀಡುತ್ತಿರುವಿರಿ ನೀವು |
إِذْ دَخَلُوا عَلَيْهِ فَقَالُوا سَلَامًا قَالَ إِنَّا مِنكُمْ وَجِلُونَ (52) ಅವರು ಹೇಳಿದರು; ನಾವು ನಿಮಗೆ ಸತ್ಯದ ಶುಭವಾರ್ತೆ ನೀಡುತ್ತಿದ್ದೇವೆ. ನೀವು ನಿರಾಶರ ಸಾಲಿಗೆ ಸೇರಬೇಡಿ |
قَالُوا لَا تَوْجَلْ إِنَّا نُبَشِّرُكَ بِغُلَامٍ عَلِيمٍ (53) ಅವರು (ಇಬ್ರಾಹೀಮ್) ಹೇಳಿದರು; ದಾರಿಗೆಟ್ಟವರ ಹೊರತು ಇನ್ನಾರು ತಾನೇ ತನ್ನ ಒಡೆಯನ ಅನುಗ್ರಹದ ಬಗ್ಗೆ ನಿರಾಶನಾಗಬಲ್ಲನು |
قَالَ أَبَشَّرْتُمُونِي عَلَىٰ أَن مَّسَّنِيَ الْكِبَرُ فَبِمَ تُبَشِّرُونَ (54) ಅವರು (ಇಬ್ರಾಹೀಮ್) ಕೇಳಿದರು; ದೂತರುಗಳೇ, ನಿಮ್ಮ ಹೊಣೆಗಾರಿಕೆ ಏನು |
قَالُوا بَشَّرْنَاكَ بِالْحَقِّ فَلَا تَكُن مِّنَ الْقَانِطِينَ (55) ಅವರು ಹೇಳಿದರು; ನಮ್ಮನ್ನು ಅಪರಾಧಿ ಜನಾಂಗದೆಡೆಗೆ ಕಳಿಸಲಾಗಿದೆ |
قَالَ وَمَن يَقْنَطُ مِن رَّحْمَةِ رَبِّهِ إِلَّا الضَّالُّونَ (56) ಲೂತ್‌ರ ಮನೆಯವರ ಹೊರತು – ಅವರನ್ನೆಲ್ಲಾ ನಾವು ರಕ್ಷಿಸುವೆವು – |
قَالَ فَمَا خَطْبُكُمْ أَيُّهَا الْمُرْسَلُونَ (57) ಆದರೆ, ಅವರ ಪತ್ನಿಯ ಹೊರತು. ಖಂಡಿತವಾಗಿಯೂ ಆಕೆಯು ಹಿಂದುಳಿದವರಲ್ಲಿ ಒಬ್ಬಳಾಗಿರುವಳೆಂದು ನಾವು ತೀರ್ಮಾನಿಸಿರುವೆವು |
قَالُوا إِنَّا أُرْسِلْنَا إِلَىٰ قَوْمٍ مُّجْرِمِينَ (58) ಕೊನೆಗೆ ಆ ದೂತರು ಲೂತ್‌ರ ಮನೆಯವರ ಬಳಿಗೆ ಬಂದರು |
إِلَّا آلَ لُوطٍ إِنَّا لَمُنَجُّوهُمْ أَجْمَعِينَ (59) ಅವರು (ಲೂತ್); ನೀವು ತೀರಾ ಅಪರಿಚಿತರು! ಎಂದರು |
إِلَّا امْرَأَتَهُ قَدَّرْنَا ۙ إِنَّهَا لَمِنَ الْغَابِرِينَ (60) ಅವರು ಹೇಳಿದರು; ನಿಜವಾಗಿ, ಅವರು (ಲೂತ್‌ರ ನಾಡಿನವರು) ಯಾವುದರ ಕುರಿತು ಸಂಶಯದಲ್ಲಿದ್ದರೋ ಅದನ್ನೇ (ದೇವರ ಶಿಕ್ಷೆಯನ್ನೇ) ನಾವು ತಂದಿರುವೆವು |
فَلَمَّا جَاءَ آلَ لُوطٍ الْمُرْسَلُونَ (61) ಮತ್ತು ನಾವು ಸತ್ಯದೊಂದಿಗೆ ನಿಮ್ಮ ಬಳಿಗೆ ಬಂದಿರುವೆವು – ನಾವು ಖಂಡಿತ ಸತ್ಯವಂತರು |
قَالَ إِنَّكُمْ قَوْمٌ مُّنكَرُونَ (62) ನೀವು ರಾತ್ರಿಯ ಒಂದು ಹಂತದಲ್ಲಿ ನಿಮ್ಮ ಮನೆಯವರ ಜೊತೆ ಹೊರಟು ಹೋಗಿರಿ ಮತ್ತು ನೀವು ಸ್ವತಃ ಅವರನ್ನು ಹಿಂಬಾಲಿಸುತ್ತಾ ಅವರ ಬೆನ್ನು ಬೆನ್ನಿಗೇ ನಡೆಯಿರಿ. ನಿಮ್ಮಲ್ಲಿ ಯಾರೂ ಹಿಂದಿರುಗಿ ನೋಡಬಾರದು ಮತ್ತು ನೀವು ನಿಮಗೆ ಆದೇಶಿಸಲಾಗಿರುವ ಕಡೆಗೇ ಹೋಗಿರಿ |
قَالُوا بَلْ جِئْنَاكَ بِمَا كَانُوا فِيهِ يَمْتَرُونَ (63) ಬೆಳಗಾಗುವ ಹೊತ್ತಿಗೆ ಆ ಜನರ ಮೂಲವನ್ನೇ ಕಡಿದು ಬಿಡಲಾಗಿರುವುದು ಎಂಬ ಆ ವಿಷಯವನ್ನು ನಾವು ಅವರಿಗೆ (ಲೂತ್‌ರಿಗೆ) ಖಚಿತವಾಗಿ ತಿಳಿಸಿದೆವು |
وَأَتَيْنَاكَ بِالْحَقِّ وَإِنَّا لَصَادِقُونَ (64) ನಗರದವರು ಸಂಭ್ರಮಿಸುತ್ತಾ ಬಂದರು |
فَأَسْرِ بِأَهْلِكَ بِقِطْعٍ مِّنَ اللَّيْلِ وَاتَّبِعْ أَدْبَارَهُمْ وَلَا يَلْتَفِتْ مِنكُمْ أَحَدٌ وَامْضُوا حَيْثُ تُؤْمَرُونَ (65) ಅವರು (ಲೂತ್) ಹೇಳಿದರು; ಇವರು ನನ್ನ ಅತಿಥಿಗಳು . ನೀವು ನನ್ನನ್ನು ನಗೆಪಾಟಲಿಗೆ ಗುರಿಮಾಡಬೇಡಿ |
وَقَضَيْنَا إِلَيْهِ ذَٰلِكَ الْأَمْرَ أَنَّ دَابِرَ هَٰؤُلَاءِ مَقْطُوعٌ مُّصْبِحِينَ (66) ಮತ್ತು ನೀವು ಅಲ್ಲಾಹನಿಗೆ ಅಂಜಿರಿ ಹಾಗೂ ನನ್ನನ್ನು ಅಪಮಾನಿಸಬೇಡಿ |
وَجَاءَ أَهْلُ الْمَدِينَةِ يَسْتَبْشِرُونَ (67) ಅವರು (ನಾಡಿನವರು) ಹೇಳಿದರು; ನೀವು ಸರ್ವ ಜಗತ್ತಿನವರ ಬೆಂಬಲಕ್ಕೆ ನಿಲ್ಲಬಾರದೆಂದು ನಾವು ನಿಮ್ಮನ್ನು ತಡೆದಿರಲಿಲ್ಲವೇ |
قَالَ إِنَّ هَٰؤُلَاءِ ضَيْفِي فَلَا تَفْضَحُونِ (68) ಅವರು (ಲೂತ್) ಹೇಳಿದರು; ನೀವೇನಾದರೂ (ವಿವಾಹ) ಮಾಡಿ ಕೊಳ್ಳುವುದಿದ್ದರೆ, ಇದೋ ನನ್ನ ಪುತ್ರಿಯರು ಇಲ್ಲಿದ್ದಾರೆ |
وَاتَّقُوا اللَّهَ وَلَا تُخْزُونِ (69) (ದೂತರೇ,) ನಿಮ್ಮ ವಯಸ್ಸಿನಾಣೆ, ಆ ಜನರು ತಮ್ಮ ಮದದಲ್ಲಿ ಖಂಡಿತ ಕುರುಡಾಗಿದ್ದರು |
قَالُوا أَوَلَمْ نَنْهَكَ عَنِ الْعَالَمِينَ (70) ಕೊನೆಗೆ, ಸೂರ್ಯೋದಯದ ವೇಳೆಗೆ ಒಂದು ಭಾರೀ ಸ್ಫೋಟವು ಅವರನ್ನು ಆವರಿಸಿಕೊಂಡಿತು |
قَالَ هَٰؤُلَاءِ بَنَاتِي إِن كُنتُمْ فَاعِلِينَ (71) ನಾವು ಆ ನಾಡನ್ನು ಬುಡಮೇಲು ಗೊಳಿಸಿಬಿಟ್ಟೆವು ಮತ್ತು ನಾವು ಅವರ ಮೇಲೆ ಬೆಂದ ಕಣಗಳ ಮಳೆ ಸುರಿಸಿದೆವು |
لَعَمْرُكَ إِنَّهُمْ لَفِي سَكْرَتِهِمْ يَعْمَهُونَ (72) ಚಿಂತನೆ ನಡೆಸುವವರಿಗೆ ಖಂಡಿತವಾಗಿಯೂ ಇದರಲ್ಲಿ ಸೂಚನೆಗಳಿವೆ |
فَأَخَذَتْهُمُ الصَّيْحَةُ مُشْرِقِينَ (73) ಅದು (ಆ ನಾಡು) ಒಂದು ಪರಿಚಿತ ದಾರಿಯಲ್ಲೇ ಇದೆ |
فَجَعَلْنَا عَالِيَهَا سَافِلَهَا وَأَمْطَرْنَا عَلَيْهِمْ حِجَارَةً مِّن سِجِّيلٍ (74) ವಿಶ್ವಾಸಿಗಳಿಗೆ ಖಂಡಿತವಾಗಿಯೂ ಇದರಲ್ಲಿ ಸೂಚನೆ ಇದೆ |
إِنَّ فِي ذَٰلِكَ لَآيَاتٍ لِّلْمُتَوَسِّمِينَ (75) ಇನ್ನು, ‘ಐಕಃ’ ದವರು ಖಂಡಿತ ಅಕ್ರಮಿಗಳಾಗಿದ್ದರು |
وَإِنَّهَا لَبِسَبِيلٍ مُّقِيمٍ (76) ನಾವು ಅವರ ವಿರುದ್ಧವೂ ಪ್ರತೀಕಾರ ತೀರಿಸಿದೆವು – ಆ ಎರಡೂ ನಾಡುಗಳು ಹೆದ್ದಾರಿಯಲ್ಲೇ ಇವೆ |
إِنَّ فِي ذَٰلِكَ لَآيَةً لِّلْمُؤْمِنِينَ (77) ‘ಹಿಜ್ರ್’ ಎಂಬಲ್ಲಿನವರು ದೂತರನ್ನು ಧಿಕ್ಕರಿಸಿದ್ದರು |
وَإِن كَانَ أَصْحَابُ الْأَيْكَةِ لَظَالِمِينَ (78) ನಾವು ಅವರಿಗೆ ನಮ್ಮ ಅನೇಕ ಸೂಚನೆಗಳನ್ನು ನೀಡಿದೆವು. ಆದರೆ ಅವರು ಅವುಗಳನ್ನು ಕಡೆಗಣಿಸಿ ಬಿಟ್ಟರು |
فَانتَقَمْنَا مِنْهُمْ وَإِنَّهُمَا لَبِإِمَامٍ مُّبِينٍ (79) ಅವರು ನಿರ್ಭೀತರಾಗಿ ಪರ್ವತಗಳಲ್ಲಿ ನಿವಾಸಗಳನ್ನು ಕೊರೆಯುತ್ತಿದ್ದರು |
وَلَقَدْ كَذَّبَ أَصْحَابُ الْحِجْرِ الْمُرْسَلِينَ (80) (ಒಂದು ದಿನ) ಸೂರ್ಯೋದಯದ ವೇಳೆಗೆ, ಒಂದು ಭಾರೀ ಸ್ಫೋಟವು ಅವರನ್ನು ಆವರಿಸಿತು |
وَآتَيْنَاهُمْ آيَاتِنَا فَكَانُوا عَنْهَا مُعْرِضِينَ (81) ಅವರ ಯಾವ ಸಂಪಾದನೆಯೂ ಅವರ ಯಾವ ಕೆಲಸಕ್ಕೂ ಬರಲಿಲ್ಲ |
وَكَانُوا يَنْحِتُونَ مِنَ الْجِبَالِ بُيُوتًا آمِنِينَ (82) ಆಕಾಶಗಳನ್ನು ಹಾಗೂ ಭೂಮಿಯನ್ನು ಹಾಗೂ ಅವುಗಳ ನಡುವೆ ಇರುವ ಎಲ್ಲವನ್ನೂ ನಾವು ಸತ್ಯದೊಂದಿಗೇ ಸೃಷ್ಟಿಸಿದ್ದೇವೆ. ಅಂತಿಮ ಘಳಿಗೆಯು ಖಂಡಿತ ಬರಲಿದೆ. ನೀವು (ಜನರನ್ನು) ಕ್ಷಮಿಸಿರಿ – ಅದು ಅತ್ಯಂತ ಸುಂದರ ಕ್ಷಮೆಯಾಗಿರಲಿ |
فَأَخَذَتْهُمُ الصَّيْحَةُ مُصْبِحِينَ (83) (ದೂತರೇ,) ಖಂಡಿತವಾಗಿಯೂ ನಿಮ್ಮ ಒಡೆಯನೇ ಮಹಾನ್ ಸೃಷ್ಟಿಕರ್ತನೂ ಎಲ್ಲವನ್ನೂ ಬಲ್ಲವನೂ ಆಗಿದ್ದಾನೆ |
فَمَا أَغْنَىٰ عَنْهُم مَّا كَانُوا يَكْسِبُونَ (84) ಖಂಡಿತವಾಗಿಯೂ ನಾವು ನಿಮಗೆ ಮತ್ತೆ ಮತ್ತೆ ಓದಲಾಗುವ ಏಳು ವಾಕ್ಯಗಳನ್ನು (ಪ್ರಥಮ ಅಧ್ಯಾಯವನ್ನು) ಮತ್ತು ಭವ್ಯವಾದ ಕುರ್‌ಆನನ್ನು ನೀಡಿರುವೆವು |
وَمَا خَلَقْنَا السَّمَاوَاتِ وَالْأَرْضَ وَمَا بَيْنَهُمَا إِلَّا بِالْحَقِّ ۗ وَإِنَّ السَّاعَةَ لَآتِيَةٌ ۖ فَاصْفَحِ الصَّفْحَ الْجَمِيلَ (85) ಅವರಲ್ಲಿನ ( ಧಿಕ್ಕಾರಿಗಳಲ್ಲಿನ) ವಿವಿಧ ವರ್ಗಗಳಿಗೆ ನಾವು ಏನನ್ನು ನೀಡಿರುವೆವೋ ಅವುಗಳೆಡೆಗೆ ನೀವು ಕಣ್ಣೆತ್ತಿಯೂ ನೋಡಬೇಡಿ ಮತ್ತು ನೀವು ಅವರ ಕುರಿತು ದುಃಖಿಸಬೇಡಿ. ಹಾಗೆಯೇ, ವಿಶ್ವಾಸಿಗಳ ಪಾಲಿಗೆ ನೀವು (ವಿನಯದೆೊಂದಿಗೆ) ನಿಮ್ಮ ಭುಜವನ್ನು ತಗ್ಗಿಸಿಡಿರಿ |
إِنَّ رَبَّكَ هُوَ الْخَلَّاقُ الْعَلِيمُ (86) ಮತ್ತು ನೀವು ‘‘ಖಂಡಿತವಾಗಿಯೂ ನಾನು, ಸುಸ್ಪಷ್ಟ ಎಚ್ಚರಿಕೆ ನೀಡು ವವನಾಗಿದ್ದೇನೆ’’ ಎಂದು ಸಾರಿ ಬಿಡಿರಿ |
وَلَقَدْ آتَيْنَاكَ سَبْعًا مِّنَ الْمَثَانِي وَالْقُرْآنَ الْعَظِيمَ (87) (ಈ ಹಿಂದೆ) ವಿಭಜನವಾದಿಗಳ ಮೇಲೆ ನಾವು (ಶಿಕ್ಷೆಯನ್ನು) ಎರಗಿಸಿದ್ದೆವು |
لَا تَمُدَّنَّ عَيْنَيْكَ إِلَىٰ مَا مَتَّعْنَا بِهِ أَزْوَاجًا مِّنْهُمْ وَلَا تَحْزَنْ عَلَيْهِمْ وَاخْفِضْ جَنَاحَكَ لِلْمُؤْمِنِينَ (88) ಅವರು ಕುರ್‌ಆನನ್ನು ಛಿದ್ರಗೊಳಿಸಿದ್ದರು (ತಾವಿಚ್ಛಿಸಿದ್ದನ್ನು ಪಾಲಿಸಿ, ಉಳಿದುದನ್ನು ತಿರಸ್ಕರಿಸಿದ್ದರು) |
وَقُلْ إِنِّي أَنَا النَّذِيرُ الْمُبِينُ (89) ನಿಮ್ಮಡೆಯನಾಣೆ! ನಾವು ಅವರೆಲ್ಲರನ್ನೂ ಖಂಡಿತ ಪ್ರಶ್ನಿಸುವೆವು – |
كَمَا أَنزَلْنَا عَلَى الْمُقْتَسِمِينَ (90) – ಅವರು ಮಾಡುತ್ತಿದ್ದ ಕರ್ಮಗಳ ಕುರಿತು |
الَّذِينَ جَعَلُوا الْقُرْآنَ عِضِينَ (91) ನಿಮಗೆ ಆದೇಶಿಸಲಾಗಿರುವುದನ್ನು ನೀವು ಸ್ಪಷ್ಟವಾಗಿ ಸಾರಿ ಬಿಡಿರಿ ಮತ್ತು ಬಹುದೇವಾರಾಧಕರನ್ನು ಲೆಕ್ಕಿಸಬೇಡಿ |
فَوَرَبِّكَ لَنَسْأَلَنَّهُمْ أَجْمَعِينَ (92) ಗೇಲಿ ಮಾಡುವವರ ವಿಷಯದಲ್ಲಿ ನಿಮಗೆ ನಾವೇ ಸಾಕು |
عَمَّا كَانُوا يَعْمَلُونَ (93) ಅವರು ಅಲ್ಲಾಹನ ಜೊತೆ ಇತರರನ್ನು ದೇವರಾಗಿಸಿ ಕೊಂಡಿದ್ದಾರೆ. (ಇದರ ಫಲಿತಾಂಶವನ್ನು) ಬಹುಬೇಗನೇ ಅವರು ಅರಿಯುವರು |
فَاصْدَعْ بِمَا تُؤْمَرُ وَأَعْرِضْ عَنِ الْمُشْرِكِينَ (94) ನಮಗೆ ತಿಳಿದಿದೆ – ಅವರು ಆಡುವ ಮಾತುಗಳಿಂದ ನಿಮ್ಮ ಮನಸ್ಸಿಗೆ ತುಂಬಾ ಸಂಕಟವಾಗುತ್ತದೆಂದು |
إِنَّا كَفَيْنَاكَ الْمُسْتَهْزِئِينَ (95) ನೀವು ನಿಮ್ಮ ಒಡೆಯನನ್ನು ಸ್ತುತಿಸುತ್ತಾ ಅವನ ಪಾವಿತ್ರವನ್ನು ಜಪಿಸಿರಿ ಮತ್ತು ಸಾಷ್ಟಾಂಗ ವಂದಿಸುವವರಾಗಿರಿ |
الَّذِينَ يَجْعَلُونَ مَعَ اللَّهِ إِلَٰهًا آخَرَ ۚ فَسَوْفَ يَعْلَمُونَ (96) ಇನ್ನು, ಖಚಿತವಾದ ಆ ಘಳಿಗೆ (ಮರಣ) ಬರುವ ತನಕವೂ ನೀವು ನಿಮ್ಮ ಒಡೆಯನ ಆರಾಧನೆ ನಡೆಸಿರಿ |
وَلَقَدْ نَعْلَمُ أَنَّكَ يَضِيقُ صَدْرُكَ بِمَا يَقُولُونَ (97) ಬಂದು ಬಿಟ್ಟಿತು, ಅಲ್ಲಾಹನ ಆದೇಶ – ನೀವು ಅದಕ್ಕಾಗಿ ಆತುರ ಪಡಬೇಡಿ. ಅವನು ತುಂಬಾ ಪಾವನನು ಮತ್ತು ಅವರು (ಅವನ ಜೊತೆ) ಪಾಲುಗೊಳಿಸುವ ಎಲ್ಲವುಗಳಿಗಿಂತಲೂ ಅವನು ತುಂಬಾ ಉನ್ನತನು |
فَسَبِّحْ بِحَمْدِ رَبِّكَ وَكُن مِّنَ السَّاجِدِينَ (98) ‘‘ನನ್ನ ಹೊರತು ಬೇರೆ ಯಾರೂ ಪೂಜಾರ್ಹರಲ್ಲ ನನಗೆ ಮಾತ್ರ ಅಂಜಿರಿ’’ – ಎಂದು (ಜನರನ್ನು) ಎಚ್ಚರಿಸಲಿಕ್ಕಾಗಿ ಅವನು ತನ್ನ ಆದೇಶದಂತೆ ದಿವ್ಯವಾಣಿಯನ್ನು ಕೊಟ್ಟು, ತನ್ನ ದಾಸರ ಪೈಕಿ ತಾನಿಚ್ಛಿಸಿದವರ ಬಳಿಗೆ, ಮಲಕ್‌ಗಳನ್ನು ಇಳಿಸಿಕೊಡುತ್ತಾನೆ |
وَاعْبُدْ رَبَّكَ حَتَّىٰ يَأْتِيَكَ الْيَقِينُ (99) ಅವನು ಆಕಾಶಗಳನ್ನು ಹಾಗೂ ಭೂಮಿಯನ್ನು ಸತ್ಯದೊಂದಿಗೆ ಸೃಷ್ಟಿಸಿರುವನು. ಅವರು (ಅವನ ಜೊತೆ) ಪಾಲುಗೊಳಿಸುತ್ತಿರುವ ಎಲ್ಲವುಗಳಿಗಿಂತ ಅವನು ಉನ್ನತನು |