×

Surah Ya-Sin in Kannada

Quran Kannada ⮕ Surah Yasin

Translation of the Meanings of Surah Yasin in Kannada - الكانادا

The Quran in Kannada - Surah Yasin translated into Kannada, Surah Ya-Sin in Kannada. We provide accurate translation of Surah Yasin in Kannada - الكانادا, Verses 83 - Surah Number 36 - Page 440.

بسم الله الرحمن الرحيم

يس (1)
ಯುಕ್ತಿಪೂರ್ಣವಾಗಿರುವ ಕುರ್‌ಆನಿನಾಣೆ
وَالْقُرْآنِ الْحَكِيمِ (2)
(ದೂತರೇ,) ನೀವು ಖಂಡಿತ ಒಬ್ಬ ದೇವದೂತರಾಗಿರುವಿರಿ
إِنَّكَ لَمِنَ الْمُرْسَلِينَ (3)
ನೀವು ನೇರ ಮಾರ್ಗದಲ್ಲಿರುವಿರಿ
عَلَىٰ صِرَاطٍ مُّسْتَقِيمٍ (4)
ಪ್ರಬಲನೂ ಕರುಣಾಮಯಿಯೂ ಆಗಿರುವವನು ಇದನ್ನು ಇಳಿಸಿಕೊಟ್ಟಿರುವನು –
تَنزِيلَ الْعَزِيزِ الرَّحِيمِ (5)
– ಯಾರ ಗತ ಪೀಳಿಗೆಯನ್ನು ಎಚ್ಚರಿಸಲಾಗಿರಲಿಲ್ಲವೋ ಅವರನ್ನು ಎಚ್ಚರಿಸಲಿಕ್ಕಾಗಿ. ಅವರು ಅರಿವಿಲ್ಲದವರು
لِتُنذِرَ قَوْمًا مَّا أُنذِرَ آبَاؤُهُمْ فَهُمْ غَافِلُونَ (6)
ಅವರಲ್ಲಿ ಹೆಚ್ಚಿನವರ ಕುರಿತು (ಅಲ್ಲಾಹನ) ಮಾತು ಈಗಾಗಲೇ ಸತ್ಯವಾಗಿದೆ. ಅವರಿನ್ನು ವಿಶ್ವಾಸಿಗಳಾಗುವುದಿಲ್ಲ
لَقَدْ حَقَّ الْقَوْلُ عَلَىٰ أَكْثَرِهِمْ فَهُمْ لَا يُؤْمِنُونَ (7)
ನಾವು ಅವರ ಕೊರಳುಗಳಿಗೆ, ಗಲ್ಲದವರೆಗೂ ಬಿಗಿದಿಡುವ ನೊಗಗಳನ್ನು ಹಾಕಿರುವೆವು. ಇದರಿಂದಾಗಿ ಅವರ ತಲೆಗಳು ಸೆಟೆದುಕೊಂಡಿವೆ
إِنَّا جَعَلْنَا فِي أَعْنَاقِهِمْ أَغْلَالًا فَهِيَ إِلَى الْأَذْقَانِ فَهُم مُّقْمَحُونَ (8)
ನಾವು ಅವರ ಮುಂದೆ ಒಂದು ಗೋಡೆಯನ್ನು ಹಾಗೂ ಅವರ ಹಿಂದೆ ಒಂದು ಗೋಡೆಯನ್ನು ನಿರ್ಮಿಸಿರುವೆವು ಮತ್ತು ಅವರನ್ನು ಮುಚ್ಚಿ ಬಿಟ್ಟಿರುವೆವು. ಆದ್ದರಿಂದ ಅವರಿಗೆ ಏನೂ ಕಾಣಿಸುತ್ತಿಲ್ಲ
وَجَعَلْنَا مِن بَيْنِ أَيْدِيهِمْ سَدًّا وَمِنْ خَلْفِهِمْ سَدًّا فَأَغْشَيْنَاهُمْ فَهُمْ لَا يُبْصِرُونَ (9)
ನೀವು ಅವರನ್ನು ಎಚ್ಚರಿಸಿದರೂ ಒಂದೇ, ಎಚ್ಚರಿಸದೆ ಬಿಟ್ಟರೂ ಒಂದೇ. ಅವರಂತು ನಂಬುವವರಲ್ಲ
وَسَوَاءٌ عَلَيْهِمْ أَأَنذَرْتَهُمْ أَمْ لَمْ تُنذِرْهُمْ لَا يُؤْمِنُونَ (10)
ಉಪದೇಶವನ್ನು ಅನುಸರಿಸುವ ಹಾಗೂ ಕಣ್ಣಾರೆ ಕಾಣದೆಯೇ ಆ ಅಪಾರ ದಯಾಳುವಿಗೆ (ಅಲ್ಲಾಹನಿಗೆ) ಅಂಜುತ್ತಿರುವ ವ್ಯಕ್ತಿಯನ್ನು ಮಾತ್ರ ನೀವು ಎಚ್ಚರಿಸಬಲ್ಲಿರಿ. ಅಂಥವನಿಗೆ ನೀವು ಕ್ಷಮೆ ಹಾಗೂ ಉದಾರ ಪ್ರತಿಫಲದ ಶುಭವಾರ್ತೆ ನೀಡಿರಿ
إِنَّمَا تُنذِرُ مَنِ اتَّبَعَ الذِّكْرَ وَخَشِيَ الرَّحْمَٰنَ بِالْغَيْبِ ۖ فَبَشِّرْهُ بِمَغْفِرَةٍ وَأَجْرٍ كَرِيمٍ (11)
ಖಂಡಿತವಾಗಿಯೂ ನಾವೇ ಸತ್ತವರನ್ನು ಜೀವಂತಗೊಳಿಸುತ್ತೇವೆ ಮತ್ತು ಅವರು ಮುಂದಕ್ಕೆ ಕಳಿಸಿರುವ ಹಾಗೂ ತಮ್ಮ ಹಿಂದೆ ಬಿಟ್ಟು ಹೋಗಿರುವ ಎಲ್ಲವನ್ನೂ ನಾವು ಒಂದು ಸ್ಪಷ್ಟ ಗ್ರಂಥದಲ್ಲಿ ಎಣಿಸಿಟ್ಟಿರುವೆವು
إِنَّا نَحْنُ نُحْيِي الْمَوْتَىٰ وَنَكْتُبُ مَا قَدَّمُوا وَآثَارَهُمْ ۚ وَكُلَّ شَيْءٍ أَحْصَيْنَاهُ فِي إِمَامٍ مُّبِينٍ (12)
ನೀವು ಅವರಿಗೆ ಆ ನಾಡಿನವರ ಸಮಾಚಾರವನ್ನು ತಿಳಿಸಿರಿ; ಅವರ ಬಳಿಗೆ ದೂತರು ಬಂದಿದ್ದರು
وَاضْرِبْ لَهُم مَّثَلًا أَصْحَابَ الْقَرْيَةِ إِذْ جَاءَهَا الْمُرْسَلُونَ (13)
ನಾವು ಅವರ ಬಳಿಗೆ ಇಬ್ಬರು ದೂತರನ್ನು ಕಳಿಸಿದಾಗ ಅವರಿಬ್ಬರನ್ನೂ ಅವರು ತಿರಸ್ಕರಿಸಿದರು. ಕೊನೆಗೆ ನಾವು ಮೂರನೆಯ ದೂತನ ಮೂಲಕ ಅವರಿಗೆ ಬಲ ಒದಗಿಸಿದೆವು. ‘‘ನಮ್ಮನ್ನು ಖಚಿತವಾಗಿ ನಿಮ್ಮೆಡೆಗೇ ರವಾನಿಸಲಾಗಿದೆ’’ ಎಂದು ಅವರು ಹೇಳಿದರು
إِذْ أَرْسَلْنَا إِلَيْهِمُ اثْنَيْنِ فَكَذَّبُوهُمَا فَعَزَّزْنَا بِثَالِثٍ فَقَالُوا إِنَّا إِلَيْكُم مُّرْسَلُونَ (14)
ಆಗ ಅವರು (ನಾಡಿನವರು) ಹೇಳಿದರು; ನೀವು ನಮ್ಮಂತಹ ಮಾನವರು ಮಾತ್ರ. ಆ ಪರಮ ದಯಾಮಯನು (ಅಲ್ಲಾಹನು) ಏನನ್ನೂ ಇಳಿಸಿಕೊಟ್ಟಿಲ್ಲ. ನೀವು ಕೇವಲ ಸುಳ್ಳು ಹೇಳುತ್ತಿರುವಿರಿ
قَالُوا مَا أَنتُمْ إِلَّا بَشَرٌ مِّثْلُنَا وَمَا أَنزَلَ الرَّحْمَٰنُ مِن شَيْءٍ إِنْ أَنتُمْ إِلَّا تَكْذِبُونَ (15)
ಅವರು (ದೂತರು) ಹೇಳಿದರು; ನಾವು ನಿಮ್ಮೆಡೆಗೆ ಕಳಿಸಲ್ಪಟ್ಟವರು ಎಂಬುದನ್ನು ನಮ್ಮೊಡೆಯನು ಖಚಿತವಾಗಿ ಬಲ್ಲನು
قَالُوا رَبُّنَا يَعْلَمُ إِنَّا إِلَيْكُمْ لَمُرْسَلُونَ (16)
ನಮ್ಮ ಮೇಲಿರುವುದು ಸ್ಪಷ್ಟವಾಗಿ ಸಂದೇಶ ತಲುಪಿಸಿ ಬಿಡುವ ಹೊಣೆ ಮಾತ್ರ
وَمَا عَلَيْنَا إِلَّا الْبَلَاغُ الْمُبِينُ (17)
ಅವರು (ನಾಡಿನವರು) ಹೇಳಿದರು; ನಾವು ನಿಮ್ಮನ್ನು ಕೇವಲ ಅಪಶಕುನಗಳಾಗಿ ಕಂಡಿರುವೆವು. ನೀವು ದೂರ ನಿಲ್ಲದಿದ್ದರೆ (ಸತ್ಯಪ್ರಚಾರವನ್ನು ನಿಲ್ಲಿಸದಿದ್ದರೆ) ನಾವು ನಿಮ್ಮನ್ನು ಕಲ್ಲೆಸೆದು ಕೊಲ್ಲುವೆವು ಮತ್ತು ಖಂಡಿತವಾಗಿಯೂ ನಮ್ಮ ಕಡೆಯಿಂದ ನಿಮಗೆ ಕಠಿಣ ಶಿಕ್ಷೆ ಸಿಗುವುದು
قَالُوا إِنَّا تَطَيَّرْنَا بِكُمْ ۖ لَئِن لَّمْ تَنتَهُوا لَنَرْجُمَنَّكُمْ وَلَيَمَسَّنَّكُم مِّنَّا عَذَابٌ أَلِيمٌ (18)
ಆಗ ಅವರು (ದೂತರು) ಹೇಳಿದರು; ನಿಮ್ಮ ಅಪಶಕುನವೆಲ್ಲಾ ನಿಮ್ಮ ಜೊತೆಗೇ ಇದೆ. ನಿಮಗೆ ಬೋಧನೆ ತಲುಪಿದೆಯಲ್ಲವೇ? ನಿಜವಾಗಿ ನೀವು ಎಲ್ಲೆ ಮೀರುವವರಾಗಿದ್ದೀರಿ
قَالُوا طَائِرُكُم مَّعَكُمْ ۚ أَئِن ذُكِّرْتُم ۚ بَلْ أَنتُمْ قَوْمٌ مُّسْرِفُونَ (19)
ನಗರದ ಮೂಲೆಯಿಂದ ಧಾವಿಸಿಬಂದ ಒಬ್ಬ ವ್ಯಕ್ತಿ ಹೇಳಿದನು; ನನ್ನ ಜನಾಂಗದವರೇ, ದೇವದೂತರನ್ನು ಅನುಸರಿಸಿರಿ
وَجَاءَ مِنْ أَقْصَى الْمَدِينَةِ رَجُلٌ يَسْعَىٰ قَالَ يَا قَوْمِ اتَّبِعُوا الْمُرْسَلِينَ (20)
ನಿಮ್ಮಿಂದ ಯಾವ ಪ್ರತಿಫಲವನ್ನೂ ಬಯಸದ ಹಾಗೂ ಮಾರ್ಗದರ್ಶನ ಪಡೆದಿರುವ, ಅವರನ್ನು ಅನುಸರಿಸಿರಿ
اتَّبِعُوا مَن لَّا يَسْأَلُكُمْ أَجْرًا وَهُم مُّهْتَدُونَ (21)
ನನ್ನನ್ನು ರೂಪಿಸಿದಾತನನ್ನು ನಾನೇಕೆ ಪೂಜಿಸಬಾರದು? ಕೊನೆಗಂತು, ನಿಮ್ಮೆಲ್ಲರನ್ನೂ ಅವನ ಕಡೆಗೇ ಮರಳಿಸಲಾಗುವುದು
وَمَا لِيَ لَا أَعْبُدُ الَّذِي فَطَرَنِي وَإِلَيْهِ تُرْجَعُونَ (22)
ನಾನೇನು, ಅವನ ಹೊರತು ಇತರ ಯಾರನ್ನಾದರೂ ದೇವರಾಗಿಸಿಕೊಳ್ಳಬೇಕೆ? ನಿಜವಾಗಿ, ಆ ಪರಮ ದಯಾಳು ನನಗೇನಾದರೂ ಹಾನಿಯನ್ನುಂಟು ಮಾಡ ಬಯಸಿದರೆ, ಅವರ (ಅನ್ಯರ) ಶಿಫಾರಸ್ಸು ನನ್ನ ಯಾವ ಕೆಲಸಕ್ಕೂ ಬಾರದು ಮತ್ತು ನನ್ನನ್ನು ರಕ್ಷಿಸಲು ಅವರಿಗೆ ಸಾಧ್ಯವಾಗದು
أَأَتَّخِذُ مِن دُونِهِ آلِهَةً إِن يُرِدْنِ الرَّحْمَٰنُ بِضُرٍّ لَّا تُغْنِ عَنِّي شَفَاعَتُهُمْ شَيْئًا وَلَا يُنقِذُونِ (23)
ಹಾಗೆ ಮಾಡಿದರೆ (ಅನ್ಯರನ್ನು ಪೂಜಿಸಿದರೆ), ನಾನು ಸ್ಪಷ್ಟ ದಾರಿಗೇಡಿತನದಲ್ಲಿ ಇದ್ದಂತಾಗುವುದು
إِنِّي إِذًا لَّفِي ضَلَالٍ مُّبِينٍ (24)
ನೀವು ನನ್ನ ಮಾತನ್ನು ಕೇಳಿರಿ ನಾನು ನಿಮ್ಮ ನೈಜ ಒಡೆಯನನ್ನು ನಂಬಿದ್ದೇನೆ
إِنِّي آمَنتُ بِرَبِّكُمْ فَاسْمَعُونِ (25)
(ಅವರು ಆತನನ್ನು ಕೊಂದಾಗ) ‘ಸ್ವರ್ಗವನ್ನು ಪ್ರವೇಶಿಸು’ ಎಂದು ಅವನೊಡನೆ ಹೇಳಲಾಯಿತು. ಅವನು ಹೇಳಿದನು; ‘‘ಅಯ್ಯೋ, ನನ್ನ ಜನಾಂಗದವರಿಗೆ (ಇದು) ತಿಳಿದಿದ್ದರೆ ಎಷ್ಟು ಚೆನ್ನಾಗಿತ್ತು!’’
قِيلَ ادْخُلِ الْجَنَّةَ ۖ قَالَ يَا لَيْتَ قَوْمِي يَعْلَمُونَ (26)
‘‘ನನ್ನ ಒಡೆಯನು ನನ್ನನ್ನು ಕ್ಷಮಿಸಿರುವನು ಮತ್ತು ನನ್ನನ್ನು ಗೌರವಾನ್ವಿತರ ಸಾಲಿಗೆ ಸೇರಿಸಿರುವನೆಂಬುದು (ಅವರಿಗೆ ತಿಳಿದಿರಬೇಕಿತ್ತು)’’
بِمَا غَفَرَ لِي رَبِّي وَجَعَلَنِي مِنَ الْمُكْرَمِينَ (27)
ಆತನ (ಮರಣದ ಬಳಿಕ) ನಾವೇನೂ ಅವನ ಜನಾಂಗದ ವಿರುದ್ಧ ಆಕಾಶದಿಂದ ಯಾವುದೇ ಪಡೆಯನ್ನು ಇಳಿಸಲಿಲ್ಲ. ಇಳಿಸುವ ಅಗತ್ಯವೂ ನಮಗಿರಲಿಲ್ಲ
۞ وَمَا أَنزَلْنَا عَلَىٰ قَوْمِهِ مِن بَعْدِهِ مِن جُندٍ مِّنَ السَّمَاءِ وَمَا كُنَّا مُنزِلِينَ (28)
ಅದು (ಅವರ ಶಿಕ್ಷೆ) ಕೇವಲ ಒಂದು ಭೀಕರ ಬಿರುಗಾಳಿಯಾಗಿತ್ತು. ಅಷ್ಟಕ್ಕೇ ಅವರು ಆರಿ ಹೋದರು
إِن كَانَتْ إِلَّا صَيْحَةً وَاحِدَةً فَإِذَا هُمْ خَامِدُونَ (29)
ಎಷ್ಟೊಂದು ಶೋಚನೀಯವಾಗಿದೆ, ದಾಸರ ಸ್ಥಿತಿ! ಅವರ ಬಳಿಗೆ ಬಂದ ಯಾವ ದೂತನನ್ನೂ ಅವರು ಗೇಲಿ ಮಾಡದೆ ಬಿಟ್ಟದ್ದಿಲ್ಲ
يَا حَسْرَةً عَلَى الْعِبَادِ ۚ مَا يَأْتِيهِم مِّن رَّسُولٍ إِلَّا كَانُوا بِهِ يَسْتَهْزِئُونَ (30)
ಅವರೇನು ನೋಡಿಲ್ಲವೇ, ಅವರಿಗಿಂತ ಹಿಂದೆ ಅದೆಷ್ಟು ನಾಡುಗಳನ್ನು ನಾವು ನಾಶಗೊಳಿಸಿ ಬಿಟ್ಟಿದ್ದೇವೆಂದು? ಅವರೆಂದೂ ಅವರ ಬಳಿಗೆ ಮರಳಿ ಬರಲಾರರು
أَلَمْ يَرَوْا كَمْ أَهْلَكْنَا قَبْلَهُم مِّنَ الْقُرُونِ أَنَّهُمْ إِلَيْهِمْ لَا يَرْجِعُونَ (31)
ಅವರಲ್ಲಿನ ಪ್ರತಿಯೊಬ್ಬರನ್ನೂ ನಮ್ಮ ಬಳಿ ಒಟ್ಟಾಗಿ ಹಾಜರುಪಡಿಸಲಾಗುವುದು
وَإِن كُلٌّ لَّمَّا جَمِيعٌ لَّدَيْنَا مُحْضَرُونَ (32)
ನಿರ್ಜೀವ ಭೂಮಿಯು ಅವರ ಪಾಲಿಗೆ ಪುರಾವೆಯಾಗಿದೆ. ನಾವು ಅದನ್ನು ಜೀವಂತಗೊಳಿಸಿದೆವು ಹಾಗೂ ಅದರಿಂದ ಧಾನ್ಯಗಳನ್ನು ಉತ್ಪಾದಿಸಿದೆವು. ಅವುಗಳನ್ನೇ ಅವರು ತಿನ್ನುತ್ತಾರೆ
وَآيَةٌ لَّهُمُ الْأَرْضُ الْمَيْتَةُ أَحْيَيْنَاهَا وَأَخْرَجْنَا مِنْهَا حَبًّا فَمِنْهُ يَأْكُلُونَ (33)
ಮತ್ತು ನಾವು ಅದರಲ್ಲಿ ಖರ್ಜೂರದ ಹಾಗೂ ದ್ರಾಕ್ಷಿಯ ತೋಟಗಳನ್ನು ಬೆಳೆಸಿದೆವು ಮತ್ತು ಅದರಲ್ಲಿ ನದಿಗಳನ್ನು ಹರಿಸಿದೆವು
وَجَعَلْنَا فِيهَا جَنَّاتٍ مِّن نَّخِيلٍ وَأَعْنَابٍ وَفَجَّرْنَا فِيهَا مِنَ الْعُيُونِ (34)
ಅವರು ಅದರ ಫಲಗಳನ್ನು ಉಣ್ಣಲೆಂದು (ನಾವು ಇದನ್ನೆಲ್ಲಾ ಮಾಡಿರುವೆವು). ಇದಾವುದನ್ನೂ ಅವರ ಕೈಗಳು ನಿರ್ಮಿಸಿಲ್ಲ. ಇಷ್ಟಾಗಿಯೂ ಅವರೇನು ಕೃತಜ್ಞತೆ ಸಲ್ಲಿಸುವುದಿಲ್ಲವೇ
لِيَأْكُلُوا مِن ثَمَرِهِ وَمَا عَمِلَتْهُ أَيْدِيهِمْ ۖ أَفَلَا يَشْكُرُونَ (35)
ಭೂಮಿಯು ಬೆಳೆಯುವ ಎಲ್ಲ ವಸ್ತುಗಳನ್ನೂ, ಸ್ವತಃ ಅವರನ್ನೂ, ಅವರಿಗೆ ತಿಳಿದಿಲ್ಲದ (ಹಲವು) ಜೀವಿಗಳನ್ನೂ – ಎಲ್ಲವನ್ನೂ ಜೋಡಿಗಳಾಗಿ ಸೃಷ್ಟಿಸಿದವನು (ಅಲ್ಲಾಹನು), ಪಾವನನು
سُبْحَانَ الَّذِي خَلَقَ الْأَزْوَاجَ كُلَّهَا مِمَّا تُنبِتُ الْأَرْضُ وَمِنْ أَنفُسِهِمْ وَمِمَّا لَا يَعْلَمُونَ (36)
ರಾತ್ರಿಯು ಅವರ ಪಾಲಿಗೆ ಪುರಾವೆಯಾಗಿದೆ. ನಾವು ಅದರಿಂದ ಹಗಲನ್ನು ಇಳಿಸಿಬಿಟ್ಟಾಗ, ಅವರು ಕತ್ತಲನ್ನು ಪಡೆಯುತ್ತಾರೆ
وَآيَةٌ لَّهُمُ اللَّيْلُ نَسْلَخُ مِنْهُ النَّهَارَ فَإِذَا هُم مُّظْلِمُونَ (37)
ಮತ್ತು ಸೂರ್ಯನು, ತನಗೆ ನಿಗದಿ ಪಡಿಸಲಾಗಿರುವ ದಾರಿಯಲ್ಲಿ ಚಲಿಸುತ್ತಿರುತ್ತಾನೆ. ಇದು ಆ ಪ್ರಚಂಡ, ಸರ್ವಜ್ಞನು (ಅಲ್ಲಾಹನು) ಸ್ಥಾಪಿಸಿರುವ ವ್ಯವಸ್ಥೆ
وَالشَّمْسُ تَجْرِي لِمُسْتَقَرٍّ لَّهَا ۚ ذَٰلِكَ تَقْدِيرُ الْعَزِيزِ الْعَلِيمِ (38)
ಇನ್ನು ಚಂದ್ರನಿಗೆ ನಾವು ಕೆಲವು ಹಂತಗಳನ್ನು ನಿಗದಿ ಪಡಿಸಿರುವೆವು. ಎಷ್ಟೆಂದರೆ ಅದು (ಬಾಲಚಂದ್ರ) ಖರ್ಜೂರದ ಹಳೆಯ ಗೆಲ್ಲಿನಂತಾಗಿ ಬಿಡುತ್ತದೆ
وَالْقَمَرَ قَدَّرْنَاهُ مَنَازِلَ حَتَّىٰ عَادَ كَالْعُرْجُونِ الْقَدِيمِ (39)
ಚಂದ್ರನನ್ನು ಹಿಡಿಯಲು ಸೂರ್ಯನಿಗೆ ಸಾಧ್ಯವಿಲ್ಲ, ಹಗಲನ್ನು ಮೀರಿ ಬರಲು ರಾತ್ರಿಗೂ ಸಾಧ್ಯವಿಲ್ಲ. ಎಲ್ಲವೂ ಒಂದು ವೃತ್ತದಲ್ಲಿ ಚಲಿಸುತ್ತಿವೆ
لَا الشَّمْسُ يَنبَغِي لَهَا أَن تُدْرِكَ الْقَمَرَ وَلَا اللَّيْلُ سَابِقُ النَّهَارِ ۚ وَكُلٌّ فِي فَلَكٍ يَسْبَحُونَ (40)
ನಾವು ಅವರ ಸಂತತಿಯನ್ನು ತುಂಬಿದ ಹಡಗಿಗೆ ಹತ್ತಿಸಿದ್ದು, ಅವರ ಪಾಲಿಗೆ ಪುರಾವೆಯಾಗಿದೆ
وَآيَةٌ لَّهُمْ أَنَّا حَمَلْنَا ذُرِّيَّتَهُمْ فِي الْفُلْكِ الْمَشْحُونِ (41)
ಮತ್ತು ನಾವು ಅವರಿಗಾಗಿ, ಅವರು ಸವಾರಿ ಮಾಡುವ ಇನ್ನೂ ಹಲವು ವಸ್ತುಗಳನ್ನು ಸೃಷ್ಟಿಸಿರುವುದು (ಪುರಾವೆಯಾಗಿದೆ)
وَخَلَقْنَا لَهُم مِّن مِّثْلِهِ مَا يَرْكَبُونَ (42)
ನಾವು ಬಯಸಿದ್ದರೆ ಅವರನ್ನು ಮುಳುಗಿಸಿ ಬಿಡಬಹುದು. ಆಗ ಅವರ ಮೊರೆ ಕೇಳುವವರು ಯಾರೂ ಇರಲಾರರು ಮತ್ತು ಅವರು ರಕ್ಷಣೆ ಪಡೆಯಲಾರರು
وَإِن نَّشَأْ نُغْرِقْهُمْ فَلَا صَرِيخَ لَهُمْ وَلَا هُمْ يُنقَذُونَ (43)
ಆದರೆ, ಕೇವಲ ಒಂದು ನಿರ್ದಿಷ್ಟ ಕಾಲದವರೆಗೆ ಅವರು ನಮ್ಮ ಅನುಗ್ರಹದ ಫಲಾನುಭವಿಗಳಾಗಿರುತ್ತಾರೆ
إِلَّا رَحْمَةً مِّنَّا وَمَتَاعًا إِلَىٰ حِينٍ (44)
ನೀವು (ಅಲ್ಲಾಹನ) ಕೃಪೆಗೆ ಪಾತ್ರರಾಗಲು, ನಿಮ್ಮ ಮುಂದಿನ ಹಾಗೂ ನಿಮ್ಮ ಹಿಂದಿನ (ಕರ್ಮಗಳ) ಕುರಿತು ಎಚ್ಚರವಾಗಿರಿ ಎಂದು ಅವರೊಡನೆ ಹೇಳಿದಾಗಲೆಲ್ಲಾ
وَإِذَا قِيلَ لَهُمُ اتَّقُوا مَا بَيْنَ أَيْدِيكُمْ وَمَا خَلْفَكُمْ لَعَلَّكُمْ تُرْحَمُونَ (45)
ಮತ್ತು ತಮ್ಮ ಒಡೆಯನ ಪುರಾವೆಗಳ ಪೈಕಿ ಯಾವುದೇ ಪುರಾವೆ ಅವರ ಬಳಿಗೆ ಬಂದಾಗಲೆಲ್ಲಾ, ಅವರು ಅದನ್ನು ಕಡೆಗಣಿಸಿದ್ದಾರೆ
وَمَا تَأْتِيهِم مِّنْ آيَةٍ مِّنْ آيَاتِ رَبِّهِمْ إِلَّا كَانُوا عَنْهَا مُعْرِضِينَ (46)
ಅಲ್ಲಾಹನು ನಿಮಗೇನನ್ನು ನೀಡಿರುವನೋ ಅದರಿಂದ, (ಸತ್ಕಾರ್ಯಕ್ಕೆ) ಖರ್ಚು ಮಾಡಿರಿ ಎಂದು ತಮ್ಮೊಡನೆ ಹೇಳಿದಾಗಲೆಲ್ಲಾ (ಅವರು ಕಡೆಗಣಿಸಿದ್ದಾರೆ). ಧಿಕ್ಕಾರಿಗಳು, ವಿಶ್ವಾಸಿಗಳೊಡನೆ ಹೇಳುತ್ತಾರೆ: ಅಲ್ಲಾಹನು ಇಚ್ಛಿಸಿದ್ದರೆ ಸ್ವತಃ ಅವನೇ ಯಾರಿಗೆ ಉಣಿಸಿ ಬಿಡುತ್ತಿದ್ದನೋ, ಅಂಥವನಿಗೇನು ನಾವು ಉಣಿಸಬೇಕೇ? ನೀವಂತು ಸ್ಪಷ್ಟವಾಗಿ ದಾರಿಗೆಟ್ಟ ಸ್ಥಿತಿಯಲ್ಲಿದ್ದೀರಿ
وَإِذَا قِيلَ لَهُمْ أَنفِقُوا مِمَّا رَزَقَكُمُ اللَّهُ قَالَ الَّذِينَ كَفَرُوا لِلَّذِينَ آمَنُوا أَنُطْعِمُ مَن لَّوْ يَشَاءُ اللَّهُ أَطْعَمَهُ إِنْ أَنتُمْ إِلَّا فِي ضَلَالٍ مُّبِينٍ (47)
ಮತ್ತು ಅವರು, ನೀವು ಸತ್ಯವಂತರಾಗಿದ್ದರೆ, ಆ ವಾಗ್ದಾನ (ಪುನರುತ್ಥಾನ) ಈಡೇರುವುದು ಯಾವಾಗ (ಎಂಬುದನ್ನು ತಿಳಿಸಿ)? ಎಂದು ಕೇಳುತ್ತಾರೆ
وَيَقُولُونَ مَتَىٰ هَٰذَا الْوَعْدُ إِن كُنتُمْ صَادِقِينَ (48)
ನಿಜವಾಗಿ ಅವರು ಯಾವುದಕ್ಕಾಗಿ ಕಾಯುತ್ತಿರುವರೋ ಅದು ಹಠಾತ್ತನೆ ಬಂದೆರಗುವ ಒಂದು ಸಿಡಿಲು ಮಾತ್ರವಾಗಿರುವುದು – ಅವರು ಜಗಳಾಡುತ್ತಿರುವಾಗಲೇ ಅದು ಅವರನ್ನು ಹಿಡಿದುಕೊಳ್ಳುವುದು
مَا يَنظُرُونَ إِلَّا صَيْحَةً وَاحِدَةً تَأْخُذُهُمْ وَهُمْ يَخِصِّمُونَ (49)
ಉಯಿಲನ್ನು ಉಪದೇಶಿಸಲಿಕ್ಕಾಗಲಿ, ತಮ್ಮ ಮನೆಯವರ ಬಳಿಗೆ ಮರಳಿ ಹೋಗಲಿಕ್ಕಾಗಲಿ ಅವರಿಗೆ ಸಾಧ್ಯವಾಗದು
فَلَا يَسْتَطِيعُونَ تَوْصِيَةً وَلَا إِلَىٰ أَهْلِهِمْ يَرْجِعُونَ (50)
ಮತ್ತು (ಇನ್ನೊಮ್ಮೆ) ಕಹಳೆಯನ್ನು ಊದಲಾದಾಗ ಅವರೆಲ್ಲರೂ ಗೋರಿಗಳಿಂದ ಹಠಾತ್ತನೆ ಎದ್ದು ತಮ್ಮ ಒಡೆಯನೆಡೆಗೆ ಧಾವಿಸುವರು
وَنُفِخَ فِي الصُّورِ فَإِذَا هُم مِّنَ الْأَجْدَاثِ إِلَىٰ رَبِّهِمْ يَنسِلُونَ (51)
ಅವರು ಹೇಳುವರು: ಅಯ್ಯೋ ನಮ್ಮ ದುಸ್ಥಿತಿ! ನಮ್ಮನ್ನು ನಮ್ಮ ಗೋರಿಗಳಿಂದ ಎಬ್ಬಿಸಿದವರು ಯಾರು? ನಿಜವಾಗಿ, ಆ ಪರಮ ದಯಾಮಯನು ವಾಗ್ದಾನ ಮಾಡಿದ್ದು ಇದನ್ನೇ. ದೇವದೂತರು ಸತ್ಯವನ್ನೆ ಹೇಳಿದ್ದರು
قَالُوا يَا وَيْلَنَا مَن بَعَثَنَا مِن مَّرْقَدِنَا ۜ ۗ هَٰذَا مَا وَعَدَ الرَّحْمَٰنُ وَصَدَقَ الْمُرْسَلُونَ (52)
ಅದು ಕೇವಲ ಒಂದು ಸಿಡಿಲಾಗಿರುವುದು. ಅಷ್ಟರಲ್ಲೇ ಅವರೆಲ್ಲರನ್ನೂ ನಮ್ಮ ಮುಂದೆ ಹಾಜರು ಪಡಿಸಲಾಗುವುದು
إِن كَانَتْ إِلَّا صَيْحَةً وَاحِدَةً فَإِذَا هُمْ جَمِيعٌ لَّدَيْنَا مُحْضَرُونَ (53)
ಇಂದು ಯಾರ ಮೇಲೂ ಕಿಂಚಿತ್ತೂ ಅನ್ಯಾಯವಾಗದು ಮತ್ತು ನಿಮಗೆ, ನೀವು ಮಾಡುತ್ತಿದ್ದ ಕರ್ಮಗಳ ಪ್ರತಿಫಲದ ಹೊರತು ಬೇರೇನೂ ಸಿಗದು
فَالْيَوْمَ لَا تُظْلَمُ نَفْسٌ شَيْئًا وَلَا تُجْزَوْنَ إِلَّا مَا كُنتُمْ تَعْمَلُونَ (54)
ಸ್ವರ್ಗವಾಸಿಗಳು ಅಂದು ಖಂಡಿತ ಮೋಜಿನಲ್ಲಿ ನಿರತರಾಗಿರುವರು
إِنَّ أَصْحَابَ الْجَنَّةِ الْيَوْمَ فِي شُغُلٍ فَاكِهُونَ (55)
ಅವರು ಮತ್ತವರ ಜೀವನ ಸಂಗಾತಿಗಳು ನೆರಳುಗಳಲ್ಲಿ ಸುಖವಾಗಿ ಒರಗಿ ಕೊಂಡಿರುವರು
هُمْ وَأَزْوَاجُهُمْ فِي ظِلَالٍ عَلَى الْأَرَائِكِ مُتَّكِئُونَ (56)
ಅಲ್ಲಿ ಅವರಿಗಾಗಿ ವಿವಿಧ ಬಗೆಯ ಹಣ್ಣು ಹಂಪಲುಗಳಿರುವವು ಮತ್ತು ಅವರು ಅಪೇಕ್ಷಿಸಿದ್ದೆಲ್ಲವೂ ಅವರಿಗೆ ಸಿಗುವುದು
لَهُمْ فِيهَا فَاكِهَةٌ وَلَهُم مَّا يَدَّعُونَ (57)
ಸಲಾಮ್ (ಶಾಂತಿ) ಎಂಬ, ಕರುಣಾಳು ಒಡೆಯನ ಮಾತು (ಅಲ್ಲಿ ಮೊಳಗುತ್ತಿರುವುದು)
سَلَامٌ قَوْلًا مِّن رَّبٍّ رَّحِيمٍ (58)
ಅಪರಾಧಿಗಳೇ, ಇಂದು ನೀವು ಪ್ರತ್ಯೇಕವಾಗಿರಿ
وَامْتَازُوا الْيَوْمَ أَيُّهَا الْمُجْرِمُونَ (59)
ಆದಮರ ಸಂತತಿಗಳೇ, ನಾನು ನಿಮಗೆ ಆದೇಶಿಸಿರಲಿಲ್ಲವೇ, ನೀವು ಶೈತಾನನ ಆರಾಧಕರಾಗಬೇಡಿ, ಅವನು ಖಂಡಿತ ನಿಮ್ಮ ಸ್ಪಷ್ಟ ಶತ್ರುವಾಗಿದ್ದಾನೆಂದು
۞ أَلَمْ أَعْهَدْ إِلَيْكُمْ يَا بَنِي آدَمَ أَن لَّا تَعْبُدُوا الشَّيْطَانَ ۖ إِنَّهُ لَكُمْ عَدُوٌّ مُّبِينٌ (60)
ಮತ್ತು ನೀವು ನನ್ನೊಬ್ಬನನ್ನೇ ಆರಾಧಿಸಬೇಕು, ಅದುವೇ ನೇರ ಮಾರ್ಗವೆಂದು
وَأَنِ اعْبُدُونِي ۚ هَٰذَا صِرَاطٌ مُّسْتَقِيمٌ (61)
ಅವನು ನಿಮ್ಮಲ್ಲಿ ಬಹು ಮಂದಿಯನ್ನು ದಾರಿಗೆಡಿಸಿದ್ದಾನೆ. ನೀವೇನು ಬುದ್ಧಿಯನ್ನು ಬಳಸಿರಲಿಲ್ಲವೇ
وَلَقَدْ أَضَلَّ مِنكُمْ جِبِلًّا كَثِيرًا ۖ أَفَلَمْ تَكُونُوا تَعْقِلُونَ (62)
ಇದುವೇ ನಿಮಗೆ ವಾಗ್ದಾನ ಮಾಡಲಾಗಿದ್ದ ನರಕ
هَٰذِهِ جَهَنَّمُ الَّتِي كُنتُمْ تُوعَدُونَ (63)
ನೀವು (ಸತ್ಯವನ್ನು) ಧಿಕ್ಕರಿಸಿದ್ದರ ಪ್ರತಿಫಲವಾಗಿ ಇಂದು ಇದರೊಳಗೆ ಪ್ರವೇಶಿಸಿರಿ
اصْلَوْهَا الْيَوْمَ بِمَا كُنتُمْ تَكْفُرُونَ (64)
ಇಂದು ನಾವು ಅವರ (ಧಿಕ್ಕಾರಿಗಳ) ಬಾಯಿಗಳಿಗೆ ಮುದ್ರೆ ಜಡಿದಿರುವೆವು. ನಮ್ಮೊಡನೆ ಅವರ ಕೈಗಳು ಮಾತನಾಡುವವು ಮತ್ತು ಅವರು ಏನೆಲ್ಲಾ ಮಾಡಿದ್ದರೆಂದು ಅವರ ಕಾಲುಗಳು ಸಾಕ್ಷಿ ಹೇಳುವವು
الْيَوْمَ نَخْتِمُ عَلَىٰ أَفْوَاهِهِمْ وَتُكَلِّمُنَا أَيْدِيهِمْ وَتَشْهَدُ أَرْجُلُهُم بِمَا كَانُوا يَكْسِبُونَ (65)
ನಾವು ಬಯಸಿದರೆ ಅವರ ಕಣ್ಣುಗಳನ್ನು ನುಚ್ಚು ನೂರುಗೊಳಿಸಿ ಬಿಡಬಲ್ಲೆವು. ಆ ಬಳಿಕ ಅವರು ದಾರಿಯೆಡೆಗೆ ಧಾವಿಸಲಿ. ಅವರು ಏನನ್ನು ತಾನೇ ಕಾಣಬಲ್ಲರು
وَلَوْ نَشَاءُ لَطَمَسْنَا عَلَىٰ أَعْيُنِهِمْ فَاسْتَبَقُوا الصِّرَاطَ فَأَنَّىٰ يُبْصِرُونَ (66)
ನಾವು ಬಯಸಿದರೆ, ಅವರು ಇರುವಲ್ಲೇ ಅವರ ರೂಪಗಳನ್ನು ವಿಕೃತಗೊಳಿಸಿ ಬಿಡಬಲ್ಲೆವು – ಆ ಬಳಿಕ ಅವರಿಗೆ ಮುಂದೆ ಹೋಗಲಿಕ್ಕೂ ಸಾಧ್ಯವಾಗದು, ಮರಳಲಿಕ್ಕೂ ಆಗದು
وَلَوْ نَشَاءُ لَمَسَخْنَاهُمْ عَلَىٰ مَكَانَتِهِمْ فَمَا اسْتَطَاعُوا مُضِيًّا وَلَا يَرْجِعُونَ (67)
ನಾವು ಯಾರಿಗೆ ಧೀರ್ಘ ಆಯುಷ್ಯವನ್ನು ಕೊಡುತ್ತೇವೋ, ಅವರನ್ನು ರಚನೆಯಲ್ಲಿ (ದುರ್ಬಲ ಸ್ಥಿತಿಗೆ) ಮರಳಿಸಿ ಬಿಡುತ್ತೇವೆ. ಅವರೇನು ಬುದ್ದಿಯನ್ನು ಬಳಸುವುದಿಲ್ಲವೇ
وَمَن نُّعَمِّرْهُ نُنَكِّسْهُ فِي الْخَلْقِ ۖ أَفَلَا يَعْقِلُونَ (68)
ನಾವು ಅವರಿಗೆ (ದೂತರಿಗೆ) ಕಾವ್ಯವನ್ನು ಕಲಿಸಿಲ್ಲ. ಅದು ಅವರಿಗೆ ಭೂಷಣವೂ ಅಲ್ಲ. ಇದು ಕೇವಲ ಒಂದು ಉಪದೇಶವಾಗಿದೆ ಮತ್ತು ಸ್ಪಷ್ಟವಾದ ಕುರ್‌ಆನ್ ಆಗಿದೆ
وَمَا عَلَّمْنَاهُ الشِّعْرَ وَمَا يَنبَغِي لَهُ ۚ إِنْ هُوَ إِلَّا ذِكْرٌ وَقُرْآنٌ مُّبِينٌ (69)
ಜೀವಂತವಿರುವ ಎಲ್ಲರನ್ನೂ ಅವರು (ದೂತರು) ಎಚ್ಚರಿಸಬೇಕೆಂದು ಹಾಗೂ ಧಿಕ್ಕಾರಿಗಳ ವಿರುದ್ಧ ಸಾಕ್ಷವು ಪೂರ್ತಿಯಾಗಲೆಂದು (ನಾವು ಇದನ್ನು ಕಳಿಸಿರುವೆವು)
لِّيُنذِرَ مَن كَانَ حَيًّا وَيَحِقَّ الْقَوْلُ عَلَى الْكَافِرِينَ (70)
ಅವರು ನೋಡುತ್ತಿಲ್ಲವೇ, ಅವರು ಮಾಲಕರಾಗಿರುವ ಜಾನುವಾರುಗಳನ್ನು ನಾವು ಅವರಿಗಾಗಿ ನಮ್ಮ ಕೈಯಾರೆ ಸೃಷ್ಟಿಸಿರುವೆವು
أَوَلَمْ يَرَوْا أَنَّا خَلَقْنَا لَهُم مِّمَّا عَمِلَتْ أَيْدِينَا أَنْعَامًا فَهُمْ لَهَا مَالِكُونَ (71)
ನಾವು ಅವುಗಳನ್ನು ಅವರಿಗೆ ವಿಧೇಯಗೊಳಿಸಿರುವೆವು. ಅವರು ಆ ಪೈಕಿ ಕೆಲವನ್ನು ಸವಾರಿಗಾಗಿ ಬಳಸಿದರೆ, ಕೆಲವನ್ನು ಆಹಾರವಾಗಿ ಬಳಸುತ್ತಾರೆ
وَذَلَّلْنَاهَا لَهُمْ فَمِنْهَا رَكُوبُهُمْ وَمِنْهَا يَأْكُلُونَ (72)
ಅವುಗಳಲ್ಲಿ ಅವರಿಗೆ ಹಲವು ಲಾಭಗಳಿವೆ, ಕುಡಿಯುವ ವಸ್ತುಗಳೂ ಇವೆ. ಇಷ್ಟಿದ್ದೂ ಅವರು ಕೃತಜ್ಞತೆ ತೋರುವುದಿಲ್ಲವೇ
وَلَهُمْ فِيهَا مَنَافِعُ وَمَشَارِبُ ۖ أَفَلَا يَشْكُرُونَ (73)
ಅವರು ಅಲ್ಲಾಹನ ಹೊರತು ಇತರರಿಂದ ತಮಗೆ ನೆರವು ದೊರಕೀತೆಂದು ಅವರನ್ನು ತಮ್ಮ ದೇವರಾಗಿಸಿಕೊಂಡಿದ್ದಾರೆ
وَاتَّخَذُوا مِن دُونِ اللَّهِ آلِهَةً لَّعَلَّهُمْ يُنصَرُونَ (74)
ಅವರು ಇವರಿಗೆ ನೆರವಾಗಲು ಶಕ್ತರಲ್ಲ. ಆದರೂ, ಇವರು ಅವರ ಮುಂದೆ ದಂಡುಗಳಂತೆ ಹಾಜರಾಗುತ್ತಾರೆ
لَا يَسْتَطِيعُونَ نَصْرَهُمْ وَهُمْ لَهُمْ جُندٌ مُّحْضَرُونَ (75)
(ದೂತರೇ,) ಅವರ ಮಾತುಗಳಿಂದ ನೀವು ದುಃಖಿತರಾಗಬೇಡಿ. ಅವರು ಬಚ್ಚಿಡುವ ಹಾಗೂ ಪ್ರಕಟ ಪಡಿಸುವ ಎಲ್ಲವನ್ನೂ ನಾವು ಬಲ್ಲೆವು
فَلَا يَحْزُنكَ قَوْلُهُمْ ۘ إِنَّا نَعْلَمُ مَا يُسِرُّونَ وَمَا يُعْلِنُونَ (76)
ಮನುಷ್ಯನು ಕಂಡಿಲ್ಲವೇ, ನಾವು ಅವನನ್ನು ವೀರ್ಯದಿಂದ ಸೃಷ್ಟಿಸಿರುವುದನ್ನು? ಇಷ್ಟಾಗಿಯೂ ಅವನು ಸ್ಪಷ್ಟ ಜಗಳಗಂಟನಾಗಿ ಬಿಟ್ಟಿರುವನು
أَوَلَمْ يَرَ الْإِنسَانُ أَنَّا خَلَقْنَاهُ مِن نُّطْفَةٍ فَإِذَا هُوَ خَصِيمٌ مُّبِينٌ (77)
ಅವನು ನಮ್ಮ ಕುರಿತು (ಏನೇನೋ) ಹೋಲಿಕೆಗಳನ್ನು ಕಟ್ಟುತ್ತಾನೆ. ನಿಜವಾಗಿ ಅವನು ತನ್ನ ಜನನವನ್ನು ಮರೆತಿದ್ದಾನೆ. ಎಲುಬುಗಳು ಕರಗಿ ಹೋದ ಬಳಿಕ ಅವುಗಳನ್ನು ಯಾರು ತಾನೆ ಜೀವಂತಗೊಳಿಸಬಲ್ಲರು? ಎಂದು ಅವನು ಪ್ರಶ್ನಿಸುತ್ತಾನೆ
وَضَرَبَ لَنَا مَثَلًا وَنَسِيَ خَلْقَهُ ۖ قَالَ مَن يُحْيِي الْعِظَامَ وَهِيَ رَمِيمٌ (78)
ಹೇಳಿರಿ; ಅವುಗಳನ್ನು ಮೊದಲ ಬಾರಿ ಸೃಷ್ಟಿಸಿದವನೇ ಅವುಗಳನ್ನು ಮತ್ತೆ ಸೃಷ್ಟಿಸುವನು. ಅವನು ಎಲ್ಲ ಬಗೆಯ ಸೃಷ್ಟಿ ಕಾರ್ಯವನ್ನು ಬಲ್ಲವನಾಗಿದ್ದಾನೆ
قُلْ يُحْيِيهَا الَّذِي أَنشَأَهَا أَوَّلَ مَرَّةٍ ۖ وَهُوَ بِكُلِّ خَلْقٍ عَلِيمٌ (79)
ಅವನೇ, ನಿಮಗಾಗಿ ಹಸಿರು ಮರದಿಂದ ಬೆಂಕಿಯನ್ನು ಉತ್ಪಾದಿಸಿದವನು, ನೀವೀಗ ಅದರಿಂದಲೇ ಬೆಂಕಿಯನ್ನು ಉರಿಸುತ್ತೀರಿ
الَّذِي جَعَلَ لَكُم مِّنَ الشَّجَرِ الْأَخْضَرِ نَارًا فَإِذَا أَنتُم مِّنْهُ تُوقِدُونَ (80)
ಆಕಾಶಗಳನ್ನು ಹಾಗೂ ಭೂಮಿಯನ್ನು ಸೃಷ್ಟಿಸಿದವನು ಇವರಂಥವರನ್ನು ಸೃಷ್ಟಿಸಲು ಅಸಮರ್ಥನೇ? ಖಂಡಿತ ಅಲ್ಲ. ಅವನಂತು, ಎಲ್ಲವನ್ನೂ ಬಲ್ಲ, ತಜ್ಞ ಸೃಷ್ಟಿಕರ್ತನಾಗಿದ್ದಾನೆ
أَوَلَيْسَ الَّذِي خَلَقَ السَّمَاوَاتِ وَالْأَرْضَ بِقَادِرٍ عَلَىٰ أَن يَخْلُقَ مِثْلَهُم ۚ بَلَىٰ وَهُوَ الْخَلَّاقُ الْعَلِيمُ (81)
ಅವನು ಏನನ್ನಾದರೂ ಮಾಡಲು ಇಚ್ಛಿಸಿದಾಗ, ಅದಕ್ಕೆ ‘ಆಗು’ ಎಂದಷ್ಟೆ ಹೇಳುತ್ತಾನೆ ಮತ್ತು ಅಷ್ಟರಲ್ಲೇ ಅದು ಆಗಿ ಬಿಟ್ಟಿರುತ್ತದೆ
إِنَّمَا أَمْرُهُ إِذَا أَرَادَ شَيْئًا أَن يَقُولَ لَهُ كُن فَيَكُونُ (82)
ಅವನು ಪಾವನನು, ಎಲ್ಲ ವಸ್ತುಗಳ ಪರಮಾಧಿಕಾರವು ಅವನ ಕೈಯಲ್ಲಿದೆ. (ಕೊನೆಗೆ) ನಿಮ್ಮೆಲ್ಲರನ್ನೂ ಅವನೆಡೆಗೇ ಮರಳಿಸಲಾಗುವುದು
فَسُبْحَانَ الَّذِي بِيَدِهِ مَلَكُوتُ كُلِّ شَيْءٍ وَإِلَيْهِ تُرْجَعُونَ (83)
ಶಿಸ್ತು ಬದ್ಧವಾಗಿ ಸಾಲುಗಟ್ಟಿರುವವರ (ಮಲಕ್‌ಗಳ) ಆಣೆ
❮ Previous Next ❯

Surahs from Quran :

1- Fatiha2- Baqarah
3- Al Imran4- Nisa
5- Maidah6- Anam
7- Araf8- Anfal
9- Tawbah10- Yunus
11- Hud12- Yusuf
13- Raad14- Ibrahim
15- Hijr16- Nahl
17- Al Isra18- Kahf
19- Maryam20- TaHa
21- Anbiya22- Hajj
23- Muminun24- An Nur
25- Furqan26- Shuara
27- Naml28- Qasas
29- Ankabut30- Rum
31- Luqman32- Sajdah
33- Ahzab34- Saba
35- Fatir36- Yasin
37- Assaaffat38- Sad
39- Zumar40- Ghafir
41- Fussilat42- shura
43- Zukhruf44- Ad Dukhaan
45- Jathiyah46- Ahqaf
47- Muhammad48- Al Fath
49- Hujurat50- Qaf
51- zariyat52- Tur
53- Najm54- Al Qamar
55- Rahman56- Waqiah
57- Hadid58- Mujadilah
59- Al Hashr60- Mumtahina
61- Saff62- Jumuah
63- Munafiqun64- Taghabun
65- Talaq66- Tahrim
67- Mulk68- Qalam
69- Al-Haqqah70- Maarij
71- Nuh72- Jinn
73- Muzammil74- Muddathir
75- Qiyamah76- Insan
77- Mursalat78- An Naba
79- Naziat80- Abasa
81- Takwir82- Infitar
83- Mutaffifin84- Inshiqaq
85- Buruj86- Tariq
87- Al Ala88- Ghashiya
89- Fajr90- Al Balad
91- Shams92- Lail
93- Duha94- Sharh
95- Tin96- Al Alaq
97- Qadr98- Bayyinah
99- Zalzalah100- Adiyat
101- Qariah102- Takathur
103- Al Asr104- Humazah
105- Al Fil106- Quraysh
107- Maun108- Kawthar
109- Kafirun110- Nasr
111- Masad112- Ikhlas
113- Falaq114- An Nas