لَا أُقْسِمُ بِهَٰذَا الْبَلَدِ (1) ಇಲ್ಲ, ನಾನು ಈ ನಗರದ ಆಣೆ ಹಾಕುತ್ತೇನೆ |
وَأَنتَ حِلٌّ بِهَٰذَا الْبَلَدِ (2) ನೀವು ಇದೇ ನಗರದಲ್ಲಿ ಇರುವವರು |
وَوَالِدٍ وَمَا وَلَدَ (3) ತಂದೆಯ (ಆದಮರ) ಮತ್ತು ಅವರ ಸಂತತಿಯ ಆಣೆ |
لَقَدْ خَلَقْنَا الْإِنسَانَ فِي كَبَدٍ (4) ನಾವು ಮನುಷ್ಯನನ್ನು ಇಕ್ಕಟ್ಟಿನಲ್ಲಿರುವವನಾಗಿ ಸೃಷ್ಟಿಸಿದ್ದೇವೆ |
أَيَحْسَبُ أَن لَّن يَقْدِرَ عَلَيْهِ أَحَدٌ (5) ತನ್ನ ಮೇಲೆ ಯಾರಿಗೂ ನಿಯಂತ್ರಣವಿಲ್ಲವೆಂದು ಅವನು ಭಾವಿಸಿದ್ದಾನೆಯೇ |
يَقُولُ أَهْلَكْتُ مَالًا لُّبَدًا (6) ನಾನು ಬಹಳಷ್ಟು ಸಂಪತ್ತನ್ನು ವ್ಯರ್ಥಗೊಳಿಸಿದ್ದೇನೆ ಎಂದವನು ಹೇಳುತ್ತಾನೆ |
أَيَحْسَبُ أَن لَّمْ يَرَهُ أَحَدٌ (7) ಅವನೇನು, ತನ್ನನ್ನು ಯಾರೂ ನೋಡಿಲ್ಲವೆಂದು ಭಾವಿಸಿದ್ದಾನೆಯೇ |
أَلَمْ نَجْعَل لَّهُ عَيْنَيْنِ (8) ನಾವೇನು ಅವನಿಗೆ ಎರಡು ಕಣ್ಣುಗಳನ್ನು ನೀಡಿಲ್ಲವೇ |
وَلِسَانًا وَشَفَتَيْنِ (9) ನಾಲಿಗೆ ಹಾಗೂ ಎರಡು ತುಟಿಗಳನ್ನು ನೀಡಿಲ್ಲವೇ |
وَهَدَيْنَاهُ النَّجْدَيْنِ (10) ಮತ್ತು ಅವನಿಗೆ ಎರಡು ದಾರಿಗಳನ್ನು ತೋರಿಸಿಲ್ಲವೇ |
فَلَا اقْتَحَمَ الْعَقَبَةَ (11) ಆದರೆ ಅವನು ಏರು ಹಾದಿಯನ್ನು ಕ್ರಮಿಸಲು ನಿರಾಕರಿಸಿದನು |
وَمَا أَدْرَاكَ مَا الْعَقَبَةُ (12) ನಿಮಗೇನು ಗೊತ್ತು ಆ ಏರು ಹಾದಿ ಏನೆಂದು |
فَكُّ رَقَبَةٍ (13) (ದಾಸ್ಯದಲ್ಲಿರುವವರ) ಕೊರಳನ್ನು ಬಿಡಿಸುವುದು |
أَوْ إِطْعَامٌ فِي يَوْمٍ ذِي مَسْغَبَةٍ (14) ಅಥವಾ ಹಸಿವಿನ ದಿನ ಉಣಿಸುವುದು |
يَتِيمًا ذَا مَقْرَبَةٍ (15) ಸಂಬಂಧಿಕನಾಗಿರುವ ಅನಾಥನನ್ನು ಪೋಷಿಸುವುದು |
أَوْ مِسْكِينًا ذَا مَتْرَبَةٍ (16) ಸಂಕಷ್ಟದಲ್ಲಿರುವ ಬಡವನಿಗೆ ನೆರವಾಗುವುದು |
ثُمَّ كَانَ مِنَ الَّذِينَ آمَنُوا وَتَوَاصَوْا بِالصَّبْرِ وَتَوَاصَوْا بِالْمَرْحَمَةِ (17) (ಇದನ್ನು ಮಾಡಿದವನು) ವಿಶ್ವಾಸಿಗಳ, ಪರಸ್ಪರ ಸಹನೆಯನ್ನು ಬೋಧಿಸುವವರ ಹಾಗೂ ಪರಸ್ಪರ ಕರುಣೆಯನ್ನು ಬೋಧಿಸುವವರ ಸಾಲಿಗೆ ಸೇರಿರಬೇಕು |
أُولَٰئِكَ أَصْحَابُ الْمَيْمَنَةِ (18) ಅವರೇ ಬಲ ಭಾಗದವರು (ಸೌಭಾಗ್ಯವಂತರು) |
وَالَّذِينَ كَفَرُوا بِآيَاتِنَا هُمْ أَصْحَابُ الْمَشْأَمَةِ (19) ಇನ್ನು, ನಮ್ಮ ವಚನಗಳನ್ನು ಧಿಕ್ಕರಿಸಿದವರೇ ಎಡಭಾಗದವರು (ಭಾಗ್ಯಹೀನರು) |
عَلَيْهِمْ نَارٌ مُّؤْصَدَةٌ (20) ಅವರನ್ನು ನರಕಾಗ್ನಿಯಲ್ಲಿ ಮುಚ್ಚಿ ಬಿಡಲಾಗುವುದು |