يُسَبِّحُ لِلَّهِ مَا فِي السَّمَاوَاتِ وَمَا فِي الْأَرْضِ الْمَلِكِ الْقُدُّوسِ الْعَزِيزِ الْحَكِيمِ (1) ವಿಶ್ವಾಸಿಗಳೇ, ನೀವು ಅಲ್ಲಾಹನ ಸಹಾಯಕರಾಗಿರಿ – ಮರ್ಯಮರ ಪುತ್ರ ಈಸಾ ತಮ್ಮ ಆಪ್ತ ಶಿಷ್ಯರೊಡನೆ ‘‘ಅಲ್ಲಾಹನ ಮಾರ್ಗದಲ್ಲಿ ನನಗೆ ನೆರವಾಗುವವರು ಯಾರಿದ್ದಾರೆ?’’ ಎಂದಂತೆ. ಅವರ ಆಪ್ತ ಶಿಷ್ಯರು ‘‘ನಾವು ಅಲ್ಲಾಹನ ಸಹಾಯಕರು’’ ಎಂದರು. ಆ ಬಳಿಕ ಇಸ್ರಾಈಲರ ಸಂತತಿಯಲ್ಲಿನ ಒಂದು ಗುಂಪು ವಿಶ್ವಾಸವಿಟ್ಟಿತು ಮತ್ತು ಇನ್ನೊಂದು ಗುಂಪು ಧಿಕ್ಕರಿಸಿತು. ನಾವು ವಿಶ್ವಾಸಿಗಳಿಗೆ ಅವರ ಶತ್ರುಗಳ ವಿರುದ್ದ ನೆರವು ಒದಗಿಸಿದೆವು ಮತ್ತು ಅವರು ವಿಜಯಿಗಳಾದರು |
هُوَ الَّذِي بَعَثَ فِي الْأُمِّيِّينَ رَسُولًا مِّنْهُمْ يَتْلُو عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِن كَانُوا مِن قَبْلُ لَفِي ضَلَالٍ مُّبِينٍ (2) ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿರುವ ಎಲ್ಲವೂ ಅಲ್ಲಾಹನ ಪಾವಿತ್ರವನ್ನು ಜಪಿಸುತ್ತಿವೆ. ಅವನು ನೈಜ ಅಧಿಪತಿಯೂ ಪರಮ ಪಾವನನೂ ಪ್ರಬಲನೂ ಯುಕ್ತಿವಂತನೂ ಆಗಿದ್ದಾನೆ |
وَآخَرِينَ مِنْهُمْ لَمَّا يَلْحَقُوا بِهِمْ ۚ وَهُوَ الْعَزِيزُ الْحَكِيمُ (3) ಅವನೇ ನಿರಕ್ಷರಿಗಳ ಮಧ್ಯೆ, ಅವರಲ್ಲೊಬ್ಬನನ್ನು ದೂತನಾಗಿ ಕಳುಹಿಸಿದನು. ಅವರು (ಆ ದೂತರು) ಅವರಿಗೆ ಆತನ ವಚನಗಳನ್ನು ಓದಿ ಕೇಳಿಸುತ್ತಾರೆ. ಹಾಗೂ ಅವರನ್ನು ಸಂಸ್ಕರಿಸುತ್ತಾರೆ ಮತ್ತು ಅವರಿಗೆ ಗ್ರಂಥವನ್ನೂ ಯುಕ್ತಿಯನ್ನೂ ಕಲಿಸಿಕೊಡುತ್ತಾರೆ. ಈ ಹಿಂದೆ ಆ ಜನರು ಸ್ಪಷ್ಟವಾಗಿ ದಾರಿಗೆಟ್ಟಿದ್ದರು |
ذَٰلِكَ فَضْلُ اللَّهِ يُؤْتِيهِ مَن يَشَاءُ ۚ وَاللَّهُ ذُو الْفَضْلِ الْعَظِيمِ (4) ಇದಲ್ಲದೆ, ಅವರ ಪೈಕಿ, ಅವರಿನ್ನೂ ಭೇಟಿಯಾಗಿಲ್ಲದವರ ಕಡೆಗೂ ಅವರನ್ನು (ದೂತರಾಗಿ) ಕಳುಹಿಸಲಾಗಿದೆ. ಅವನು ಪ್ರಬಲನೂ ಯುಕ್ತಿವಂತನೂ ಆಗಿರುತ್ತಾನೆ |
مَثَلُ الَّذِينَ حُمِّلُوا التَّوْرَاةَ ثُمَّ لَمْ يَحْمِلُوهَا كَمَثَلِ الْحِمَارِ يَحْمِلُ أَسْفَارًا ۚ بِئْسَ مَثَلُ الْقَوْمِ الَّذِينَ كَذَّبُوا بِآيَاتِ اللَّهِ ۚ وَاللَّهُ لَا يَهْدِي الْقَوْمَ الظَّالِمِينَ (5) ಇದು ಅಲ್ಲಾಹನ ಅನುಗ್ರಹ. ಅವನು ತಾನಿಚ್ಛಿಸಿದವರಿಗೆ ಇದನ್ನು ದಯಪಾಲಿಸುತ್ತಾನೆ ಮತ್ತು ಅಲ್ಲಾಹನು ಮಹಾ ಅನುಗ್ರಹಶಾಲಿಯಾಗಿದ್ದಾನೆ |
قُلْ يَا أَيُّهَا الَّذِينَ هَادُوا إِن زَعَمْتُمْ أَنَّكُمْ أَوْلِيَاءُ لِلَّهِ مِن دُونِ النَّاسِ فَتَمَنَّوُا الْمَوْتَ إِن كُنتُمْ صَادِقِينَ (6) ತೌರಾತಿನ ಹೊಣೆ ವಹಿಸಿ ಕೊಡಲಾದವರು ಮತ್ತು ಆ ಹೊಣೆಯನ್ನು ನಿರ್ವಹಿಸದೆ ಇದ್ದವರ ಉದಾಹರಣೆಯು ಗ್ರಂಥಗಳ ಹೊರೆ ಹೊತ್ತ ಕತ್ತೆಯಂತಿದೆ. ಅಲ್ಲಾಹನ ವಚನಗಳನ್ನು ತಿರಸ್ಕರಿಸಿದವರ ಸ್ಥಿತಿಯು ನಿಜಕ್ಕೂ ಕೆಟ್ಟದಾಗಿದೆ. ಅಲ್ಲಾಹನು ಅಕ್ರಮಿಗಳಿಗೆ ಸರಿದಾರಿಯನ್ನು ತೋರುವುದಿಲ್ಲ |
وَلَا يَتَمَنَّوْنَهُ أَبَدًا بِمَا قَدَّمَتْ أَيْدِيهِمْ ۚ وَاللَّهُ عَلِيمٌ بِالظَّالِمِينَ (7) ಹೇಳಿರಿ; ‘‘ಯಹೂದಿಗಳೇ, ಇತರೆಲ್ಲ ಮಾನವರನ್ನು ಬಿಟ್ಟು, ನೀವು ಮಾತ್ರ ಅಲ್ಲಾಹನಿಗೆ ಪರಮ ಆಪ್ತರು ಎಂಬ ದೊಡ್ಡಸ್ತಿಕೆ ನಿಮಗಿದ್ದರೆ ಮತ್ತು ನೀವು ಸತ್ಯವಂತರಾಗಿದ್ದರೆ, ನೀವು ಮರಣವನ್ನು ಅಪೇಕ್ಷಿಸಿರಿ’’ |
قُلْ إِنَّ الْمَوْتَ الَّذِي تَفِرُّونَ مِنْهُ فَإِنَّهُ مُلَاقِيكُمْ ۖ ثُمَّ تُرَدُّونَ إِلَىٰ عَالِمِ الْغَيْبِ وَالشَّهَادَةِ فَيُنَبِّئُكُم بِمَا كُنتُمْ تَعْمَلُونَ (8) ಅವರು ಅದನ್ನೆಂದೂ ಅಪೇಕ್ಷಿಸಲಾರರು. (ಏಕೆಂದರೆ) ಅವರ ಕೈಗಳು ಮುಂದೆ ಕಳಿಸಿರುವ ಕರ್ಮಗಳು ಹಾಗಿವೆ. ಅಲ್ಲಾಹನು ಅಕ್ರಮಿಗಳನ್ನು ಚೆನ್ನಾಗಿ ಬಲ್ಲನು |
يَا أَيُّهَا الَّذِينَ آمَنُوا إِذَا نُودِيَ لِلصَّلَاةِ مِن يَوْمِ الْجُمُعَةِ فَاسْعَوْا إِلَىٰ ذِكْرِ اللَّهِ وَذَرُوا الْبَيْعَ ۚ ذَٰلِكُمْ خَيْرٌ لَّكُمْ إِن كُنتُمْ تَعْلَمُونَ (9) ಹೇಳಿರಿ; ನೀವು ಯಾವ ಮರಣದಿಂದ ದೂರ ಓಡುತ್ತಿರುವಿರೊ ಅದು ಖಂಡಿತ ನಿಮ್ಮ ಮುಂದೆ ಬರಲಿದೆ. ಆ ಬಳಿಕ ನಿಮ್ಮನ್ನು, ಗುಪ್ತ ಹಾಗೂ ಬಹಿರಂಗವಾದ ಎಲ್ಲವನ್ನೂ ಬಲ್ಲವನ ಬಳಿಗೆ ಮರಳಿಸಲಾಗುವುದು. ನೀವು ಏನೆಲ್ಲಾ ಮಾಡುತ್ತಿದ್ದಿರೆಂಬುದನ್ನು ಆಗ ಅವನು ನಿಮಗೆ ತಿಳಿಸುವನು |
فَإِذَا قُضِيَتِ الصَّلَاةُ فَانتَشِرُوا فِي الْأَرْضِ وَابْتَغُوا مِن فَضْلِ اللَّهِ وَاذْكُرُوا اللَّهَ كَثِيرًا لَّعَلَّكُمْ تُفْلِحُونَ (10) ವಿಶ್ವಾಸಿಗಳೇ, ಶುಕ್ರವಾರದ ದಿನ ನಿಮ್ಮನ್ನು ನಮಾಝ್ಗಾಗಿ ಕರೆಯಲಾದಾಗ ಅಲ್ಲಾಹನ ಸ್ಮರಣೆಯೆಡೆಗೆ ಧಾವಿಸಿರಿ ಮತ್ತು ಇತರೆಲ್ಲಾ ವ್ಯವಹಾರಗಳನ್ನು ಬಿಟ್ಟು ಬಿಡಿರಿ. ನೀವು ಅರಿಯುವವರಾಗಿದ್ದರೆ ನಿಮ್ಮ ಪಾಲಿಗೆ ಇದುವೇ ಉತ್ತಮ |
وَإِذَا رَأَوْا تِجَارَةً أَوْ لَهْوًا انفَضُّوا إِلَيْهَا وَتَرَكُوكَ قَائِمًا ۚ قُلْ مَا عِندَ اللَّهِ خَيْرٌ مِّنَ اللَّهْوِ وَمِنَ التِّجَارَةِ ۚ وَاللَّهُ خَيْرُ الرَّازِقِينَ (11) ನೀವು ನಮಾಝನ್ನು ಮುಗಿಸಿದ ಬಳಿಕ ಭೂಮಿಯಲ್ಲಿ ಚದುರಿರಿ ಹಾಗೂ ಅಲ್ಲಾಹನ ಅನುಗ್ರಹವನ್ನು ಹುಡುಕಿರಿ ಮತ್ತು ಪದೇ ಪದೇ ಅಲ್ಲಾಹನನ್ನು ಸ್ಮರಿಸಿರಿ. ನೀವು ವಿಜಯಿಗಳಾಗಬಹುದು |