| يَا أَيُّهَا الْمُدَّثِّرُ (1) ಹೊದ್ದುಕೊಂಡಿರುವವರೇ
 | 
| قُمْ فَأَنذِرْ (2) ಎದ್ದೇಳಿರಿ ಮತ್ತು ಎಚ್ಚರಿಸಿರಿ
 | 
| وَرَبَّكَ فَكَبِّرْ (3) ನಿಮ್ಮ ಒಡೆಯನ ಹಿರಿಮೆಯನ್ನು ಕೊಂಡಾಡಿರಿ
 | 
| وَثِيَابَكَ فَطَهِّرْ (4) ನಿಮ್ಮ ವಸ್ತ್ರಗಳನ್ನು ಶುಚಿಯಾಗಿಡಿ
 | 
| وَالرُّجْزَ فَاهْجُرْ (5) ಮಾಲಿನ್ಯಗಳಿಂದ ದೂರ ಉಳಿಯಿರಿ
 | 
| وَلَا تَمْنُن تَسْتَكْثِرُ (6) (ಉಪಕೃತನಿಂದ) ಹೆಚ್ಚಿನದನ್ನು ಪಡೆಯಲಿಕ್ಕಾಗಿ ಉಪಕಾರ ಮಾಡಬೇಡಿರಿ
 | 
| وَلِرَبِّكَ فَاصْبِرْ (7) ನಿಮ್ಮೊಡೆಯನಿಗಾಗಿ ಸಹನಶೀಲರಾಗಿರಿ
 | 
| فَإِذَا نُقِرَ فِي النَّاقُورِ (8) (ಲೋಕಾಂತ್ಯದ) ಕಹಳೆಯನ್ನು ಊದಲಾದಾಗ
 | 
| فَذَٰلِكَ يَوْمَئِذٍ يَوْمٌ عَسِيرٌ (9) ಆ ದಿನವು ಬಹಳ ಕಠಿಣ ದಿನವಾಗಿರುವುದು
 | 
| عَلَى الْكَافِرِينَ غَيْرُ يَسِيرٍ (10) ಧಿಕ್ಕಾರಿಗಳ ಪಾಲಿಗೆ ಅದು ಸುಲಭವಾಗಿರಲಾರದು
 | 
| ذَرْنِي وَمَنْ خَلَقْتُ وَحِيدًا (11) ಬಿಟ್ಟು ಬಿಡಿರಿ, ನನ್ನನ್ನು ಮತ್ತು ನಾನು ಸೃಷ್ಟಿಸುವಾಗ ಒಂಟಿಯಾಗಿದ್ದಾತನನ್ನು
 | 
| وَجَعَلْتُ لَهُ مَالًا مَّمْدُودًا (12) (ಮುಂದೆ) ನಾನು ಅವನಿಗೆ ಧಾರಾಳ ಸಂಪತ್ತನ್ನು ನೀಡಿದೆನು
 | 
| وَبَنِينَ شُهُودًا (13) ಮತ್ತು ಸದಾ ಅವನ ಜೊತೆಗಿರುವ ಪುತ್ರರನ್ನು ನೀಡಿದೆನು
 | 
| وَمَهَّدتُّ لَهُ تَمْهِيدًا (14) ಮತ್ತು ಅವನಿಗೆ ಎಲ್ಲ ಬಗೆಯ ಸಾಧನಗಳನ್ನು ಒದಗಿಸಿದೆನು
 | 
| ثُمَّ يَطْمَعُ أَنْ أَزِيدَ (15) ಆದರೆ ಅವನು, ನಾನು ಮತ್ತಷ್ಟು ನೀಡಬೇಕೆಂದು ಆಸೆ ಪಡುತ್ತಿದ್ದಾನೆ
 | 
| كَلَّا ۖ إِنَّهُ كَانَ لِآيَاتِنَا عَنِيدًا (16) ಹಾಗಾಗದು; ಅವನು ನಮ್ಮ ವಚನಗಳ ಶತ್ರುವಾಗಿರುವನು
 | 
| سَأُرْهِقُهُ صَعُودًا (17) ನಾನು ಅವನನ್ನು (ನರಕದ) ದುರ್ಗಮ ಬೆಟ್ಟವನ್ನು ಹತ್ತಿಸಲಿರುವೆನು
 | 
| إِنَّهُ فَكَّرَ وَقَدَّرَ (18) ಅವನು ಯೋಚಿಸಿದನು ಮತ್ತು ನಿರ್ಧರಿಸಿಕೊಂಡನು
 | 
| فَقُتِلَ كَيْفَ قَدَّرَ (19) ನಾಶವಾಗಲಿ ಅವನು, ಎಂತಹ ನಿರ್ಧಾರ ಅವನದು
 | 
| ثُمَّ قُتِلَ كَيْفَ قَدَّرَ (20) ಮತ್ತೆ, ನಾಶವಾಗಲಿ ಅವನು, ಎಂತಹ ನಿರ್ಧಾರ ಅವನದು
 | 
| ثُمَّ نَظَرَ (21) ಮತ್ತೆ ಅವನು ನೋಡಿದನು
 | 
| ثُمَّ عَبَسَ وَبَسَرَ (22) ಮತ್ತೆ ಅವನು ಹುಬ್ಬೇರಿಸಿ ಮುಖ ತಿರುಚಿಕೊಂಡನು
 | 
| ثُمَّ أَدْبَرَ وَاسْتَكْبَرَ (23) ಮತ್ತೆ ಅವನು ತಿರುಗಿ ನಿಂತನು ಮತ್ತು ಅಹಂಕಾರ ತೋರಿದನು
 | 
| فَقَالَ إِنْ هَٰذَا إِلَّا سِحْرٌ يُؤْثَرُ (24) ಮತ್ತೆ ಅವನು ಹೇಳಿದನು; ‘‘ಇದು ಪರಂಪರಾಗತ ಮಾಟಗಾರಿಕೆಯೇ ಹೊರತು ಬೇರೇನಲ್ಲ’’
 | 
| إِنْ هَٰذَا إِلَّا قَوْلُ الْبَشَرِ (25) ‘‘ಇದು ಕೇವಲ ಮನುಷ್ಯನ ಮಾತೇ ಹೊರತು ಬೇರೇನಲ್ಲ’’
 | 
| سَأُصْلِيهِ سَقَرَ (26) ನಾವು ಅವನನ್ನು ‘ಸಕರ್’ಗೆ (ನರಕಕ್ಕೆ) ಎಸಯಲಿರುವೆವು
 | 
| وَمَا أَدْرَاكَ مَا سَقَرُ (27) ಸಕರ್ ಏನೆಂದು ನಿಮಗೇನು ಗೊತ್ತು
 | 
| لَا تُبْقِي وَلَا تَذَرُ (28) ಅದು ಉಳಿಯಲೂ ಬಿಡದು ಅಳಿಯಲೂ ಬಿಡದು
 | 
| لَوَّاحَةٌ لِّلْبَشَرِ (29) ಅದು ಮನುಷ್ಯನನ್ನು ಸುಟ್ಟು ಕರ್ರಗಾಗಿಸುವುದು
 | 
| عَلَيْهَا تِسْعَةَ عَشَرَ (30) ಅದರ ಮೇಲೆ ಹತ್ತೊಂಭತ್ತು ಮಂದಿ (ಕಾವಲುಗಾರರು) ಇರುವರು
 | 
| وَمَا جَعَلْنَا أَصْحَابَ النَّارِ إِلَّا مَلَائِكَةً ۙ وَمَا جَعَلْنَا عِدَّتَهُمْ إِلَّا فِتْنَةً لِّلَّذِينَ كَفَرُوا لِيَسْتَيْقِنَ الَّذِينَ أُوتُوا الْكِتَابَ وَيَزْدَادَ الَّذِينَ آمَنُوا إِيمَانًا ۙ وَلَا يَرْتَابَ الَّذِينَ أُوتُوا الْكِتَابَ وَالْمُؤْمِنُونَ ۙ وَلِيَقُولَ الَّذِينَ فِي قُلُوبِهِم مَّرَضٌ وَالْكَافِرُونَ مَاذَا أَرَادَ اللَّهُ بِهَٰذَا مَثَلًا ۚ كَذَٰلِكَ يُضِلُّ اللَّهُ مَن يَشَاءُ وَيَهْدِي مَن يَشَاءُ ۚ وَمَا يَعْلَمُ جُنُودَ رَبِّكَ إِلَّا هُوَ ۚ وَمَا هِيَ إِلَّا ذِكْرَىٰ لِلْبَشَرِ (31) ನಾವು ಮಲಕ್‌ಗಳನ್ನೇ ನರಕದ ಕಾವಲುಗಾರರಾಗಿಸಿರುವೆವು ಮತ್ತು ಅವರ ಸಂಖ್ಯೆಯನ್ನು ಧಿಕ್ಕಾರಿಗಳ ಪಾಲಿಗೆ ಪರೀಕ್ಷೆಯಾಗಿಸಿರುವೆವು – ಗ್ರಂಥದವರು ನಂಬಲೆಂದು ಹಾಗೂ ವಿಶ್ವಾಸಿಗಳ ವಿಶ್ವಾಸವು ಹೆಚ್ಚಲೆಂದು ಮತ್ತು ಗ್ರಂಥದವರಾಗಲಿ ವಿಶ್ವಾಸಿಗಳಾಗಲಿ ಸಂಶಯಕ್ಕೆ ತುತ್ತಾಗಬಾರದೆಂದು ಮತ್ತು ಮನಸ್ಸಿನಲ್ಲಿ ರೋಗವಿರುವವರು ಹಾಗೂ ಧಿಕ್ಕಾರಿಗಳು ‘‘ಈ ಉದಾಹರಣೆಯ ಮೂಲಕ ಅಲ್ಲಾಹನು ಬಯಸುವುದೇನನ್ನು?’’ ಎಂದು ಕೇಳಲೆಂದು. ಈ ರೀತಿ ಅಲ್ಲಾಹನು ತಾನಿಚ್ಛಿಸಿದವರನ್ನು ದಾರಿಗೆಡಿಸುತ್ತಾನೆ. ಹಾಗೂ ತಾನಿಚ್ಛಿಸಿದವರಿಗೆ ಸರಿದಾರಿಯನ್ನು ತೋರುತ್ತಾನೆ. ನಿಮ್ಮ ಒಡೆಯನ ಪಡೆಗಳ ಕುರಿತು ಅವನ ಹೊರತು ಬೇರೆ ಯಾರಿಗೂ ತಿಳಿಯದು. ಇದು ಮಾನವರಿಗಾಗಿರುವ ಉಪದೇಶ ಮಾತ್ರವಾಗಿದೆ
 | 
| كَلَّا وَالْقَمَرِ (32) ಹಾಗೇನೂ ಅಲ್ಲ, ಚಂದ್ರನಾಣೆ
 | 
| وَاللَّيْلِ إِذْ أَدْبَرَ (33) ಮತ್ತು ಇರುಳು ಮರಳುವಾಗಿನ ಆಣೆ
 | 
| وَالصُّبْحِ إِذَا أَسْفَرَ (34) ಮತ್ತು ಮುಂಜಾವು ಬೆಳಗುವಾಗಿನಾಣೆ
 | 
| إِنَّهَا لَإِحْدَى الْكُبَرِ (35) ಅದು (ನರಕವು) ಒಂದು ಮಹಾ ವಿಪತ್ತಾಗಿದೆ
 | 
| نَذِيرًا لِّلْبَشَرِ (36) ಜನರು ಅಂಜ ಬೇಕಾದ ವಸ್ತುವಾಗಿದೆ
 | 
| لِمَن شَاءَ مِنكُمْ أَن يَتَقَدَّمَ أَوْ يَتَأَخَّرَ (37) ನಿಮ್ಮ ಪೈಕಿ ಇಷ್ಟ ಉಳ್ಳವನು ಮುಂದೆ ಹೋಗಲಿ ಅಥವಾ ಹಿಂದೆ ಉಳಿಯಲಿ
 | 
| كُلُّ نَفْسٍ بِمَا كَسَبَتْ رَهِينَةٌ (38) ಪ್ರತಿಯೊಬ್ಬನೂ ತನ್ನ ಕರ್ಮಗಳ ಬದಲಿಗೆ ಒತ್ತೆಯಾಳಾಗಿರುವನು
 | 
| إِلَّا أَصْحَابَ الْيَمِينِ (39) ಬಲಭಾಗದವರ ಹೊರತು
 | 
| فِي جَنَّاتٍ يَتَسَاءَلُونَ (40) ಅವರು ಸ್ವರ್ಗ ತೋಟಗಳಲ್ಲಿ ಇರುವರು ಮತ್ತು ಪ್ರಶ್ನಿಸುವರು
 | 
| عَنِ الْمُجْرِمِينَ (41) ಅಪರಾಧಿಗಳೊಡನೆ
 | 
| مَا سَلَكَكُمْ فِي سَقَرَ (42) ‘‘ನೀವೇಕೆ ನರಕಕ್ಕೆ ಹೋದಿರಿ?’’
 | 
| قَالُوا لَمْ نَكُ مِنَ الْمُصَلِّينَ (43) ಅವರು ಹೇಳುವರು; ‘‘ನಾವು ನಮಾಝ್ ಸಲ್ಲಿಸುವವರಾಗಿರಲಿಲ್ಲ’’
 | 
| وَلَمْ نَكُ نُطْعِمُ الْمِسْكِينَ (44) ‘‘ಮತ್ತು ನಾವು ಬಡವರಿಗೆ ಉಣಿಸುತ್ತಿರಲಿಲ್ಲ’’
 | 
| وَكُنَّا نَخُوضُ مَعَ الْخَائِضِينَ (45) ‘‘ನಿರರ್ಥಕ ಮಾತುಗಳನ್ನಾಡುವವರ ಜೊತೆಗಿದ್ದು ನಾವೂ ನಿರರ್ಥಕ ಮಾತುಗಳನ್ನಾಡುತ್ತಿದ್ದೆವು’’
 | 
| وَكُنَّا نُكَذِّبُ بِيَوْمِ الدِّينِ (46) ‘‘ಮತ್ತು ನಾವು ಅಂತಿಮ ವಿಚಾರಣೆಯ ದಿನವನ್ನು ಅಲ್ಲಗಳೆಯುತ್ತಿದ್ದೆವು’’
 | 
| حَتَّىٰ أَتَانَا الْيَقِينُ (47) ‘‘ಕೊನೆಗೆ ಖಚಿತವಾದ ಆ ಸಂಭವವು (ಮರಣ) ನಮ್ಮ ಬಳಿಗೆ ಬಂದು ಬಿಟ್ಟಿತು’’
 | 
| فَمَا تَنفَعُهُمْ شَفَاعَةُ الشَّافِعِينَ (48) ಶಿಫಾರಸುದಾರರ ಶಿಫಾರಸಿನಿಂದ ಅವರಿಗೆ ಯಾವ ಲಾಭವೂ ಆಗದು
 | 
| فَمَا لَهُمْ عَنِ التَّذْكِرَةِ مُعْرِضِينَ (49) ಅವರಿಗೇನಾಗಿದೆ? ಉಪದೇಶವನ್ನು ಅವರೇಕೆ ಕಡೆಗಣಿಸುತ್ತಿದ್ದಾರೆ
 | 
| كَأَنَّهُمْ حُمُرٌ مُّسْتَنفِرَةٌ (50) ಅವರು (ಸತ್ಯದ ಮುಂದೆ) ಕತ್ತೆಗಳಂತೆ ಬೆಚ್ಚಿ ಬೀಳುತ್ತಿದ್ದಾರೆ
 | 
| فَرَّتْ مِن قَسْوَرَةٍ (51) ಸಿಂಹಕ್ಕೆ ಅಂಜಿ ಓಡುತ್ತಿರುವ (ಕತ್ತೆಗಳಂತೆ)
 | 
| بَلْ يُرِيدُ كُلُّ امْرِئٍ مِّنْهُمْ أَن يُؤْتَىٰ صُحُفًا مُّنَشَّرَةً (52) ನಿಜವಾಗಿ ಅವರ ಪೈಕಿ ಪ್ರತಿಯೊಬ್ಬರೂ, ತಮ್ಮ ಬಳಿಗೆ ತೆರೆದ ಗ್ರಂಥವೊಂದು (ಆಕಾಶದಿಂದ ಇಳಿದು) ಬರಬೇಕೆಂದು ಅಪೇಕ್ಷಿಸುತ್ತಿದ್ದಾರೆ
 | 
| كَلَّا ۖ بَل لَّا يَخَافُونَ الْآخِرَةَ (53) ಹಾಗೇನೂ ಅಲ್ಲ. ನಿಜವಾಗಿ ಅವರಿಗೆ ಪರಲೋಕದ ಭಯವಿಲ್ಲ
 | 
| كَلَّا إِنَّهُ تَذْكِرَةٌ (54) ಹಾಗೇನೂ ಅಲ್ಲ. ಇದು ಖಂಡಿತ ಒಂದು ಉಪದೇಶವಾಗಿದೆ
 | 
| فَمَن شَاءَ ذَكَرَهُ (55) ಇಷ್ಟವುಳ್ಳವನು ಇದನ್ನು ನೆನಪಿಡಲಿ
 | 
| وَمَا يَذْكُرُونَ إِلَّا أَن يَشَاءَ اللَّهُ ۚ هُوَ أَهْلُ التَّقْوَىٰ وَأَهْلُ الْمَغْفِرَةِ (56) ಅಲ್ಲಾಹನು ಇಚ್ಛಿಸುವವನು ಮಾತ್ರ ಇದನ್ನು ನೆನಪಿಡುವನು. ಅವನು (ಅಲ್ಲಾಹನು) ಭಕ್ತಿಗೆ ಅರ್ಹನು ಹಾಗೂ ಕ್ಷಮಿಸುವವನಾಗಿದ್ದಾನೆ
 |