إِذَا السَّمَاءُ انشَقَّتْ (1) ಆಕಾಶವು ಸ್ಫೋಟಿಸುವಾಗ |
وَأَذِنَتْ لِرَبِّهَا وَحُقَّتْ (2) ಅದು ತನ್ನ ಒಡೆಯನ ಆದೇಶವನ್ನು ಪಾಲಿಸುವುದು ಮತ್ತು ಅದು ಅದರ ಕರ್ತವ್ಯವಾಗಿರುವುದು |
وَإِذَا الْأَرْضُ مُدَّتْ (3) ಭೂಮಿಯನ್ನು ಸಮ ತಟ್ಟಾಗಿಸಲಾಗುವುದು |
وَأَلْقَتْ مَا فِيهَا وَتَخَلَّتْ (4) ಅದು ತನ್ನೊಳಗಿರುವ ಎಲ್ಲವನ್ನೂ ಹೊರ ಹಾಕಿ ಖಾಲಿಯಾಗಿ ಬಿಡುವುದು |
وَأَذِنَتْ لِرَبِّهَا وَحُقَّتْ (5) ಅದು ತನ್ನ ಒಡೆಯನ ಆದೇಶವನ್ನು ಪಾಲಿಸುವುದು ಮತ್ತು ಅದು ಅದರ ಕರ್ತವ್ಯವಾಗಿರುವುದು |
يَا أَيُّهَا الْإِنسَانُ إِنَّكَ كَادِحٌ إِلَىٰ رَبِّكَ كَدْحًا فَمُلَاقِيهِ (6) ಮಾನವನೇ, ನೀನು ಕ್ರಮೇಣ ನಿನ್ನೊಡೆಯನ ಕಡೆಗೇ ಹೋಗುತ್ತಿರುವೆ, ನೀನು ಖಂಡಿತ ಅವನನ್ನು ಭೇಟಿಯಾಗುವೆ |
فَأَمَّا مَنْ أُوتِيَ كِتَابَهُ بِيَمِينِهِ (7) ಯಾರ ಕರ್ಮ ಪತ್ರವನ್ನು ಅವನ ಬಲಗೈಯಲ್ಲಿ ನೀಡಲಾಯಿತೋ – |
فَسَوْفَ يُحَاسَبُ حِسَابًا يَسِيرًا (8) ಅವನ ವಿಚಾರಣೆಯು ಸುಲಭವಾಗಿ ನಡೆಯುವುದು |
وَيَنقَلِبُ إِلَىٰ أَهْلِهِ مَسْرُورًا (9) ಮತ್ತು ಅವನು ತನ್ನ ಮನೆಯವರ ಜೊತೆ ಸಂತುಷ್ಟನಾಗಿರುವನು |
وَأَمَّا مَنْ أُوتِيَ كِتَابَهُ وَرَاءَ ظَهْرِهِ (10) ಯಾರಿಗೆ ಅವನ ಗ್ರಂಥವನ್ನು ಅವನ ಬೆನ್ನ ಹಿಂದಿನಿಂದ ನೀಡಲಾಯಿತೋ |
فَسَوْفَ يَدْعُو ثُبُورًا (11) ಅವನು ಮರಣಕ್ಕಾಗಿ ಪ್ರಾರ್ಥಿಸುವನು |
وَيَصْلَىٰ سَعِيرًا (12) ಮತ್ತು ಅವನು ನರಕವನ್ನು ಪ್ರವೇಶಿಸುವನು |
إِنَّهُ كَانَ فِي أَهْلِهِ مَسْرُورًا (13) (ಇಹಲೋಕದಲ್ಲಿ) ಅವನು ತನ್ನ ಮನೆಯವರ ಜೊತೆ ಮೈ ಮರೆತಿದ್ದನು |
إِنَّهُ ظَنَّ أَن لَّن يَحُورَ (14) ತಾನೆಂದೂ (ತನ್ನ ಒಡೆಯನ ಬಳಿಗೆ) ಹೋಗಲಿಕ್ಕೇ ಇಲ್ಲವೆಂದು ಭಾವಿಸಿದ್ದನು |
بَلَىٰ إِنَّ رَبَّهُ كَانَ بِهِ بَصِيرًا (15) ಯಾಕಿಲ್ಲ; ಅವನ ಒಡೆಯನಂತೂ ಅವನನ್ನು ನೋಡುತ್ತಲೇ ಇದ್ದನು |
فَلَا أُقْسِمُ بِالشَّفَقِ (16) ಅಲ್ಲ; ನಾನು ಸಂಜೆಯ ಕೆಂಬಣ್ಣದ ಆಣೆ ಹಾಕುತ್ತೇನೆ |
وَاللَّيْلِ وَمَا وَسَقَ (17) ಮತ್ತು ಇರುಳಿನ ಹಾಗೂ ಅದು ಏನನ್ನೆಲ್ಲಾ ಆವರಿಸುತ್ತದೋ ಅವುಗಳ ಆಣೆ |
وَالْقَمَرِ إِذَا اتَّسَقَ (18) ಮತ್ತು ಚಂದ್ರನ ಹಾಗೂ ಅದು ಪೂರ್ಣವಾಗುವಾಗಿನಾಣೆ |
لَتَرْكَبُنَّ طَبَقًا عَن طَبَقٍ (19) ನೀವು ಹಂತ ಹಂತವಾಗಿ ಮೇಲೇರುವಿರಿ |
فَمَا لَهُمْ لَا يُؤْمِنُونَ (20) ಜನರಿಗೇನಾಗಿದೆ, ಅವರೇಕೆ ನಂಬುವುದಿಲ್ಲ |
وَإِذَا قُرِئَ عَلَيْهِمُ الْقُرْآنُ لَا يَسْجُدُونَ ۩ (21) ಅವರ ಮುಂದೆ ಕುರ್‌ಆನನ್ನು ಓದಲಾದಾಗ ಅವರೇಕೆ ಸಾಷ್ಟಾಂಗ ವೆರಗುವುದಿಲ್ಲ |
بَلِ الَّذِينَ كَفَرُوا يُكَذِّبُونَ (22) ನಿಜವಾಗಿ, ಧಿಕ್ಕಾರಿಗಳು ಇದನ್ನು ಸುಳ್ಳೆನ್ನುತ್ತಾರೆ |
وَاللَّهُ أَعْلَمُ بِمَا يُوعُونَ (23) ಅವರು ತಮ್ಮ ಮನಸ್ಸುಗಳಲ್ಲಿ ಅಡಗಿಸಿರುವ ಎಲ್ಲವನ್ನೂ ಅಲ್ಲಾಹನು ಬಲ್ಲನು |
فَبَشِّرْهُم بِعَذَابٍ أَلِيمٍ (24) ಅವರಿಗೆ ಒಂದು ಕಠಿಣ ಶಿಕ್ಷೆಯ ಶುಭವಾರ್ತೆ ನೀಡಿರಿ |
إِلَّا الَّذِينَ آمَنُوا وَعَمِلُوا الصَّالِحَاتِ لَهُمْ أَجْرٌ غَيْرُ مَمْنُونٍ (25) ವಿಶ್ವಾಸವಿಟ್ಟು ಸತ್ಕರ್ಮ ಮಾಡಿದವರ ಹೊರತು – ಅವರಿಗೆ ಅಪಾರ ಪ್ರತಿಫಲವಿದೆ |