| وَالسَّمَاءِ ذَاتِ الْبُرُوجِ (1) ಗೋಪುರಗಳಿರುವ ಆಕಾಶದಾಣೆ
 | 
| وَالْيَوْمِ الْمَوْعُودِ (2) ವಾಗ್ದಾನ ಮಾಡಲಾಗಿರುವ ಆ ದಿನದ ಆಣೆ
 | 
| وَشَاهِدٍ وَمَشْهُودٍ (3) ಹಾಜರಾಗುವವನ ಮತ್ತು ಯಾರ ಮುಂದೆ ಹಾಜರು ಪಡಿಸಲಾಗುವುದೋ ಅವನಾಣೆ
 | 
| قُتِلَ أَصْحَابُ الْأُخْدُودِ (4) ನಾಶವಾದರು, ಕಂದಕಗಳನ್ನು ಅಗೆದವರು
 | 
| النَّارِ ذَاتِ الْوَقُودِ (5) ಅವರು ಅದರಲ್ಲಿ ಉರಿಯುವ ಕೆಂಡಗಳನ್ನು ತುಂಬಿದ್ದರು
 | 
| إِذْ هُمْ عَلَيْهَا قُعُودٌ (6) ಅವರು ಅದರ ಸುತ್ತಲೂ ಕುಳಿತಿದ್ದರು
 | 
| وَهُمْ عَلَىٰ مَا يَفْعَلُونَ بِالْمُؤْمِنِينَ شُهُودٌ (7) ಮತ್ತು ಅವರು ವಿಶ್ವಾಸಿಗಳಿಗೆ ತಾವು ನೀಡುತ್ತಿದ್ದುದನ್ನು (ಚಿತ್ರ ಹಿಂಸೆಯನ್ನು) ನೋಡುತ್ತಿದ್ದರು
 | 
| وَمَا نَقَمُوا مِنْهُمْ إِلَّا أَن يُؤْمِنُوا بِاللَّهِ الْعَزِيزِ الْحَمِيدِ (8) ಅವರು ಆ ವಿಶ್ವಾಸಿಗಳ ವಿರುದ್ಧ ಪ್ರತೀಕಾರವೆಸಗಲು ಇಳಿದುದಕ್ಕೆ, ಅವರು (ಆ ವಿಶ್ವಾಸಿಗಳು) ಪ್ರಬಲನೂ ಪ್ರಶಂಸಾರ್ಹನೂ ಆದ ಅಲ್ಲಾಹನಲ್ಲಿ ನಂಬಿಕೆ ಇಟ್ಟರು ಎಂಬುದಷ್ಟೇ ಕಾರಣವಾಗಿತ್ತು
 | 
| الَّذِي لَهُ مُلْكُ السَّمَاوَاتِ وَالْأَرْضِ ۚ وَاللَّهُ عَلَىٰ كُلِّ شَيْءٍ شَهِيدٌ (9) ಆಕಾಶಗಳ ಮತ್ತು ಭೂಮಿಯ ಆಧಿಪತ್ಯವು ಅವನಿಗೇ (ಅಲ್ಲಾಹನಿಗೆ) ಸೇರಿದೆ. ಮತ್ತು ಅಲ್ಲಾಹನು ಎಲ್ಲದಕ್ಕೂ ನೇರ ಸಾಕ್ಷಿಯಾಗಿದ್ದಾನೆ
 | 
| إِنَّ الَّذِينَ فَتَنُوا الْمُؤْمِنِينَ وَالْمُؤْمِنَاتِ ثُمَّ لَمْ يَتُوبُوا فَلَهُمْ عَذَابُ جَهَنَّمَ وَلَهُمْ عَذَابُ الْحَرِيقِ (10) ವಿಶ್ವಾಸಿ ಪುರುಷರು ಮತ್ತು ಸ್ತ್ರೀಯರನ್ನು ಹಿಂಸಿಸಿದವರು ಹಾಗೂ ಆ ಕುರಿತು ಪಶ್ಚಾತ್ತಾಪ ಪಡದವರು – ಅವರಿಗೆ ನರಕದ ಶಿಕ್ಷೆ ಕಾದಿದೆ ಮತ್ತು ಅವರಿಗೆ ಸುಡುವ ಶಿಕ್ಷೆ ಕಾದಿದೆ
 | 
| إِنَّ الَّذِينَ آمَنُوا وَعَمِلُوا الصَّالِحَاتِ لَهُمْ جَنَّاتٌ تَجْرِي مِن تَحْتِهَا الْأَنْهَارُ ۚ ذَٰلِكَ الْفَوْزُ الْكَبِيرُ (11) ವಿಶ್ವಾಸಿಗಳಿಗೆ ಹಾಗೂ ಸತ್ಕರ್ಮಗಳನ್ನು ಮಾಡಿದವರಿಗೆ ತಳದಲ್ಲಿ ನದಿಗಳು ಹರಿಯುವ ಸ್ವರ್ಗ ತೋಟಗಳು ಸಿಗುವವು. ಇದು ನಿಜಕ್ಕೂ ದೊಡ್ಡ ಸೌಭಾಗ್ಯವಾಗಿದೆ
 | 
| إِنَّ بَطْشَ رَبِّكَ لَشَدِيدٌ (12) ನಿನ್ನ ಒಡೆಯನ ಹಿಡಿತವು ಬಹಳ ಕಠಿಣವಾಗಿರುತ್ತದೆ
 | 
| إِنَّهُ هُوَ يُبْدِئُ وَيُعِيدُ (13) ಖಂಡಿತವಾಗಿಯೂ ಅವನೇ ಸೃಷ್ಟಿ ಕಾರ್ಯವನ್ನು ಆರಂಭಿಸಿದವನು ಮತ್ತು ಅವನೇ ಅದನ್ನು ಪುನರಾವರ್ತಿಸುವನು (ಪುನಃ ಸೃಷ್ಟಿಸುವನು)
 | 
| وَهُوَ الْغَفُورُ الْوَدُودُ (14) ಅವನು ಕ್ಷಮಿಸುವವನೂ ಪ್ರೀತಿಸುವವನೂ ಆಗಿದ್ದಾನೆ
 | 
| ذُو الْعَرْشِ الْمَجِيدُ (15) ಅವನು ಗೌರವಾನ್ವಿತ ವಿಶ್ವ ಪೀಠದ ಒಡೆಯನು
 | 
| فَعَّالٌ لِّمَا يُرِيدُ (16) ಅವನು ತಾನಿಚ್ಛಿಸಿದ್ದನ್ನು ಮಾಡಿಯೇ ತೀರುತ್ತಾನೆ
 | 
| هَلْ أَتَاكَ حَدِيثُ الْجُنُودِ (17) ಪಡೆಗಳ ಸಮಾಚಾರವು ನಿಮಗೆ ತಲುಪಿದೆಯೇ
 | 
| فِرْعَوْنَ وَثَمُودَ (18) ಅಂದರೆ ಫಿರ್‌ಔನ್ ಮತ್ತು ಸಮೂದರ ಪಡೆಗಳು
 | 
| بَلِ الَّذِينَ كَفَرُوا فِي تَكْذِيبٍ (19) ನಿಜವಾಗಿ ಧಿಕ್ಕಾರಿಗಳು (ಸತ್ಯವನ್ನು) ಅಲ್ಲಗಳೆಯುತ್ತಿದ್ದಾರೆ
 | 
| وَاللَّهُ مِن وَرَائِهِم مُّحِيطٌ (20) ಅಲ್ಲಾಹನು ಅವರನ್ನು ಎಲ್ಲ ಕಡೆಯಿಂದಲೂ ಸುತ್ತುವರಿದಿದ್ದಾನೆ
 | 
| بَلْ هُوَ قُرْآنٌ مَّجِيدٌ (21) ನಿಜವಾಗಿ ಇದು ಗೌರವಾನ್ವಿತ ಕುರ್‌ಆನ್ ಆಗಿದೆ
 | 
| فِي لَوْحٍ مَّحْفُوظٍ (22) ಇದು ಸುರಕ್ಷಿತ ಗ್ರಂಥದಲ್ಲಿದೆ
 |