لَمْ يَكُنِ الَّذِينَ كَفَرُوا مِنْ أَهْلِ الْكِتَابِ وَالْمُشْرِكِينَ مُنفَكِّينَ حَتَّىٰ تَأْتِيَهُمُ الْبَيِّنَةُ (1) ಗ್ರಂಥದವರ ಮತ್ತು ಬಹುದೇವಾರಾಧಕರ ಪೈಕಿ ಧಿಕ್ಕಾರಿಗಳು, ತಮ್ಮ ಬಳಿಗೆ ಸ್ಪಷ್ಟ ಪುರಾವೆಯು ಬಂದು ಬಿಡುವ ತನಕ (ತಮ್ಮ ಧೋರಣೆಯನ್ನು) ಕೈ ಬಿಡುವವರಾಗಿರಲಿಲ್ಲ |
رَسُولٌ مِّنَ اللَّهِ يَتْلُو صُحُفًا مُّطَهَّرَةً (2) (ಇದೀಗ) ಪಾವನ ಪುಟಗಳನ್ನು ಓದಿ ಕೇಳಿಸುವ ಅಲ್ಲಾಹನ ದೂತರು (ಅವರ ಬಳಿಗೆ ಬಂದಿರುವರು) |
فِيهَا كُتُبٌ قَيِّمَةٌ (3) ಅದರಲ್ಲಿ ಖಚಿತ ಆದೇಶಗಳು ಲಿಖಿತವಾಗಿವೆ |
وَمَا تَفَرَّقَ الَّذِينَ أُوتُوا الْكِتَابَ إِلَّا مِن بَعْدِ مَا جَاءَتْهُمُ الْبَيِّنَةُ (4) (ಈ ಹಿಂದೆಯೂ) ಗ್ರಂಥದವರು, ತಮ್ಮ ಬಳಿಗೆ ಸ್ಪಷ್ಟವಾದ ಪುರಾವೆಗಳು ಬಂದ ಬಳಿಕವಷ್ಟೇ, ಛಿನ್ನ ಭಿನ್ನರಾಗಿದ್ದರು |
وَمَا أُمِرُوا إِلَّا لِيَعْبُدُوا اللَّهَ مُخْلِصِينَ لَهُ الدِّينَ حُنَفَاءَ وَيُقِيمُوا الصَّلَاةَ وَيُؤْتُوا الزَّكَاةَ ۚ وَذَٰلِكَ دِينُ الْقَيِّمَةِ (5) ನಿಷ್ಠೆಯನ್ನು ಅವನಿಗೇ (ಅಲ್ಲಾಹನಿಗೇ) ಮೀಸಲಾಗಿಟ್ಟು, ಏಕಾಗ್ರತೆಯೊಂದಿಗೆ ಅಲ್ಲಾಹನನ್ನು ಆರಾಧಿಸಬೇಕು, ನಮಾಝನ್ನು ಸಲ್ಲಿಸಬೇಕು ಮತ್ತು ಝಕಾತನ್ನು ಪಾವತಿಸಬೇಕು – ಇದುವೇ ಸ್ಥಿರವಾದ ಧರ್ಮ ಎಂದೇ (ಈ ಹಿಂದೆಯೂ) ಅವರಿಗೆ ಆದೇಶಿಸಲಾಗಿತ್ತು |
إِنَّ الَّذِينَ كَفَرُوا مِنْ أَهْلِ الْكِتَابِ وَالْمُشْرِكِينَ فِي نَارِ جَهَنَّمَ خَالِدِينَ فِيهَا ۚ أُولَٰئِكَ هُمْ شَرُّ الْبَرِيَّةِ (6) ಗ್ರಂಥದವರ ಹಾಗೂ ಬಹುದೇವಾರಾಧಕರ ಪೈಕಿ ಧಿಕ್ಕಾರಿಗಳು ಸದಾಕಾಲ ನರಕದಲ್ಲಿರುವರು – ಅವರೇ ಅತ್ಯಂತ ನೀಚ ಜೀವಿಗಳು |
إِنَّ الَّذِينَ آمَنُوا وَعَمِلُوا الصَّالِحَاتِ أُولَٰئِكَ هُمْ خَيْرُ الْبَرِيَّةِ (7) ವಿಶ್ವಾಸಿಗಳು ಮತ್ತು ಸತ್ಕರ್ಮಗಳನ್ನು ಮಾಡಿದವರು – ಖಂಡಿತ ಅವರೇ ಅತ್ಯುತ್ತಮ ಜೀವಿಗಳು |
جَزَاؤُهُمْ عِندَ رَبِّهِمْ جَنَّاتُ عَدْنٍ تَجْرِي مِن تَحْتِهَا الْأَنْهَارُ خَالِدِينَ فِيهَا أَبَدًا ۖ رَّضِيَ اللَّهُ عَنْهُمْ وَرَضُوا عَنْهُ ۚ ذَٰلِكَ لِمَنْ خَشِيَ رَبَّهُ (8) ಅವರ ಪ್ರತಿಫಲವು ಅವರ ಒಡೆಯನ ಬಳಿ – ತಳದಲ್ಲಿ ನದಿಗಳು ಹರಿಯುವಂತಹ ಸ್ವರ್ಗದ ರೂಪದಲ್ಲಿದೆ. ಅದರಲ್ಲಿ ಅವರು ಸದಾಕಾಲ ಇರುವರು. ಅಲ್ಲಾಹನು ಅವರಿಂದ ಸಂತುಷ್ಟನಾಗಿರುವನು ಮತ್ತು ಅವರು ಅಲ್ಲಾಹನಿಂದ ಸಂತುಷ್ಟರಾಗಿರುವರು. ಇದು ತಮ್ಮ ಒಡೆಯನಿಗೆ ಅಂಜುತ್ತಿದ್ದವರಿಗಾಗಿ ಇರುವ ಪ್ರತಿಫಲ |